ದೇವರಹಿಪ್ಪರಗಿ: ವಿದ್ಯಾರ್ಥಿ ಜೀವನ ಬಂಗಾರದ ಜೀವನ. ಪ್ರತಿಯೊಬ್ಬ ವಿದ್ಯಾರ್ಥಿ ತಮ್ಮ ಪದವಿ ಹಂತದಲ್ಲಿಯೇ ಉತ್ತಮ ಜೀವನ ರೂಪಿಸಿಕೊಳ್ಳಲು ಮುಂದಾಗಬೇಕು ಎಂದು ಸಿಂದಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಆರ್.ಬಿ.ಜಹಾಗೀರದಾರ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಜರುಗಿದ ಪ್ರಥಮ ವರ್ಷದ ವಿದ್ಯಾರ್ಥಿಗಳ ಒಂದು ದಿನದ ಕಾರ್ಯಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿಯೊಬ್ಬ ವಿದ್ಯಾರ್ಥಿ ಕಾಲೇಜಿನಲ್ಲಿ ದೊರೆಯುವ ಸೌಲಭ್ಯಗಳನ್ನು ಸದುಪಯೋಗ ಪಡೆಸಿಕೊಂಡು ಜೀವನ ರೂಪಿಸಿಕೊಳ್ಳಬೇಕು ಎಂದರು.
ಕಾಲೇಜು ಪ್ರಾಂಶುಪಾಲ ಅಶೋಕ ಹೆಗಡೆ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳು ಶಿಸ್ತು, ಸಂಸ್ಕಾರ, ಸಂಯಮ, ಸಂಸ್ಕೃತಿ ಮೈಗೂಡಿಸಿಕೊಂಡಿರಬೇಕು. ಗುರುಹಿರಿಯರಿಗೆ ಗೌರವ ಕೊಡುವಂತವರಾಗಿರಬೇಕು ಎಂದರು.
ದೈಹಿಕ ಶಿಕ್ಷಣ ನಿರ್ದೇಶಕ ಡಾ.ಅಶೋಕಕುಮಾರ್ ಜಾದವ ಪ್ರಾಸ್ತಾವಿಕವಾಗಿ ಮಾತನಾಡಿದರು.
ಐಕ್ಯೂಎಸಿ ಸಂಚಾಲಕ ಶಿವಪುತ್ರ ಜಾಲವಾದಿ ವಿವಿಧ ವಿಭಾಗಗಳು ಮತ್ತು ಸಮಿತಿಗಳ ಕಾರ್ಯ ಚಟುವಟಿಕೆಗಳ ಕುರಿತು, ಮುಖ್ಯ ಅಧಿಕ್ಷಕ ಜಗನ್ನಾಥ ಸಜ್ಜನ ಕಛೇರಿ ಮತ್ರು ಆಡಳಿತ ವಿಭಾಗಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು,
ಡಾ. ದ್ರಾಕ್ಷಾಯಣಮ್ಮ ಎನ್.ಸಿ, ಅಕ್ರಮ ಪಾಷಾ, ಸಿಬ್ಬಂದಿ ರಾಜೇಶ್ವರಿ ಸುಗಂಧಿ, ಶಾರದಾ ಸೋಮಾಪುರ, ಮಂಜುನಾಥ ಮಾನೆ, ಅಬ್ದುಲ್ ಸತ್ತಾರ ಮಳಖೇಡ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

