ವಿಜಯಪುರ: ಜಿಲ್ಲೆಯ ಚಡಚಣ ಪಟ್ಟಣ ಪಂಚಾಯತಿಗೆ ಸಾರ್ವತ್ರಿಕ ಚುನಾವಣೆ, ಮುದ್ದೇಬಿಹಾಳ ಪುರಸಭೆಗೆ ವಿವಿಧ ಕಾರಣಗಳಿಂದ ತೆರವಾದ ವಾರ್ಡ ನಂ.೧೮ರ ಸ್ಥಾನಕ್ಕೆ ಉಪ ಚುನಾವಣೆ ಹಾಗೂ ಮನಗೂಳಿ ಪಟ್ಟಣ ಪಂಚಾಯತ್‌ಗೆ ವಿವಿಧ ಕಾರಣಗಳಿಂದ ತೆರವಾದ ವಾರ್ಡ ಸಂ.೭ರ ಸ್ಥಾನಕ್ಕೆ ಉಪ ಚುನಾವಣೆಗೆ ಡಿ.೨೭ ರಂದು ಮತದಾನ ನಡೆಯಲಿರುವುದರಿಂದ ಶಾಂತಿಯುತ ಮತದಾನಕ್ಕಾಗಿ ಕಾನೂನು ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಡಿ.೨೫ರಂದು ಬೆಳಿಗ್ಗೆ ೭ ರಿಂದ ಡಿ.೨೭ರವರೆಗಿನ ಅವಧಿಯಲ್ಲಿ ಕಲಂ ೧೪೪ ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಲ್ಲಾದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.
ಚುನಾವಣೆ ನಡೆಯುವ ನಗರ ಮತ್ತು ಸ್ಥಳೀಯ ಸಂಸ್ಥೆಗಳ ಮತಗಟ್ಟೆ ವ್ಯಾಪ್ತಿಯಲ್ಲಿ ೫ಕ್ಕಿಂತ ಹೆಚ್ಚು ಜನರು ಗುಂಪುಗೂಡಿ ಓಡಾಡುವುದನ್ನು ನಿಷೇಧಿಸಿದೆ. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡಬಹುದಾದ ಯಾವುದೇ ಮಾರಕಾಸ್ತçಗಳನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಮತಗಟ್ಟೆ ವ್ಯಾಪ್ತಿಯ ೧೦೦ ಮಿಟರ್‌ಗಳ ಒಳಗೆ ಮತಕ್ಕಾಗಿ ಪ್ರಚಾರ ಮಾಡುವುದು, ಕಲ್ಲುಗಳನ್ನು, ಕ್ವಾರ್ ಪದಾರ್ಥ ಇಲ್ಲವೇ ಸ್ಪೋಟಕ ವಸ್ತುಗಳು ಯಾವುದೇ ದಹನ, ದಾಹಕ ವಸ್ತುಗಳು ಇತ್ಯಾದಿಗಳನ್ನು ತೆಗೆದುಕೊಂಡು ಹೋಗುವುದು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.
ಮತದಾನ ದಿನದಂದು ಮತಗಟ್ಟೆ ವ್ಯಾಪ್ತಿಯ ೧೦೦ ಮೀಟರ್ ಪ್ರದೇಶದಲ್ಲಿ ಮೊಬೈಲ್ ಫೋನ್, ಕಾರ್ಡಲೆಸ್ ಫೋನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಶವ ಸಂಸ್ಕಾರ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ
Subscribe to Updates
Get the latest creative news from FooBar about art, design and business.
Related Posts
Add A Comment
