ವಿಜಯಪುರ: ನಗರದ ಜ್ಞಾನಯೋಗಾಶ್ರಮದ ನಡೆದಾಡುವ ದೇವರು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಗುರುನಮನ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಡಿ.೨೩ ರಿಂದ ೩೧ರವರೆಗೆ ಪ್ರತಿದಿನ ಸಂಜೆ ೫ ರಿಂದ ಕವಿಗೋಷ್ಠಿಗಳು ಜರುಗಲಿದ್ದು, ಸಾರ್ವಜನಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರತಿದಿನ ಸಂಜೆ ೪ ಗಂಟೆಯಿಂದ ಕವಿಗೊಷ್ಠಿ ಮುಗಿಯುವರೆಗೆ ನಗರದ ವಿವಿಧ ಬಡಾವಣೆಗಳಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದ ವತಿಯಿಂದ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ಪ್ರಯಾಣಿಕರ ಅನುಕೂಲಕ್ಕಾಗಿ ಗಣೇಶನಗರ, ರೈಲು ನಿಲ್ದಾಣ, ಕೇಂದ್ರ ಬಸ್‌ನಿಲ್ದಾಣ, ಗಾಂಧಿಚೌಕ್, ತೊರವಿ ಸ್ಥಳಗಳಿಂದ ಆಶ್ರಮಕ್ಕೆ ಹೆಚ್ಚುವರಿ ನಗರ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುವುದು. ಅದರಂತೆ ಜನವರಿ ೧ ಹಾಗೂ ೨ ರಂದು ಜರುಗುವ ಗುರುನಮನ ಮಹೋತ್ಸವ ಅಂಗವಾಗಿ ಮುಂಜಾನೆಯಿಂದ ಸಾಯಂಕಾಲದವರೆಗೆ ವಿವಿಧ ಬಡಾವಣೆಗಳಿಂದ ಹೆಚ್ಚುವರಿ ನಗರ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುವುದು. ಸಾರ್ವಜನಿಕರು ಸಾರಿಗೆ ವ್ಯವಸ್ಥೆಯ ಸದುಪಯೋಗ ಪಡೆದುಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
