ಬಸವನಬಾಗೇವಾಡಿ: ಜಗತ್ತಿನಲ್ಲಿ ಪ್ರತಿಯೊಬ್ಬರಿಗೂ ಜೀವಿಸುವ ಹಕ್ಕು ಇದೆ. ದೇಶದ ಸಂವಿಧಾನ ನಮಗೆ ಕೆಲವು ಹಕ್ಕುಗಳನ್ನು ನೀಡಿದೆ.ಈ ಹಕ್ಕುಗಳ ಸದುಪಯೋಗ ಮಾಡುವ ಜೊತೆಗೆ ಸಂವಿಧಾನ ನೀಡಿದ ಕರ್ತವ್ಯವನ್ನು ಪ್ರತಿಯೊಬ್ಬರೂ ಪಾಲಿಸುವುದು ತುಂಬಾ ಮುಖ್ಯವಾಗಿದೆ ಎಂದು ಸಿವ್ಹಿಲ್ ನ್ಯಾಯಾಧೀಶೆ ತೇಜಸ್ವಿನಿ ಸೊಗಲದ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಮಾನವ ಹಕ್ಕುಗಳ ದಿನ ಮತ್ತು ಗ್ರಾಹಕರ ದಿನಾಚರಣೆಯಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಯುವಜನಾಂಗ ತಮ್ಮ ಜವಾಬ್ದಾರಿ ಮರೆಯುತ್ತಿರುವುದು ವಿಷಾದನೀಯ ಸಂಗತಿ. ಅವರು ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿದ್ದಾರೆ. ಯುವಜನಾಂಗವು ಕಾನೂನು ಅರಿವು ಮೂಡಿಸಿಕೊಳ್ಳುವ ಮೂಲಕ ದೇಶದ ಪ್ರಗತಿಗೆ ಕೈಜೋಡಿಸುವಂತಾಗಬೇಕೆಂದರು.
ವಕೀಲ ಆರ್.ಎನ್.ಪವಾರ ಮಾತನಾಡಿದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ, ಎಎಸ್ಐ ಬನಸೋಡೆ, ವಕೀಲರಾದ ಬಿ.ಆರ್.ಅಡ್ಡೋಡಗಿ, ರವಿ ರಾಠೋಡ, ರಾಷ್ಟ್ರೀಯ ಬಸವ ಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಮುಖಂಡರಾದ ಪರಶುರಾಮ ಅಡಗಿಮನಿ, ಅರವಿಂದ ಸಾಲವಾಡಗಿ, ಗುರು ಗುಡಿಮನಿ, ಇತರರು ಇದ್ದರು. ರಮೇಶ ಕಳಸಗೊಂಡ ನಿರೂಪಿಸಿ, ವಂದಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

