ಬಸವನ ಬಾಗೇವಾಡಿ: ನಮ್ಮ ಬದುಕಿನಲ್ಲಿ ಧಾರ್ಮಿಕ ಆಚರಣೆಗಳು ನೆಮ್ಮದಿ ನೀಡುವಲ್ಲಿ ಬಹು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಸಚಿವ ಶಿವಾನಂದ ಪಾಟೀಲ ಅವರು ಅಭಿಪ್ರಾಯ ಪಟ್ಟರು.
ತಾಲೂಕಿನ ಹಂಗರಗಿ ಗ್ರಾಮದಲ್ಲಿ ಮಾರುತೇಶ್ವರ ಹಾಗೂ ಈಶ್ವರ ದೇವರ ಜಾತ್ರೆಯಂಗವಾಗಿ ಈಚೆಗೆ ಹಮ್ಮಿಕೊಂಡಿದ್ದ ಜನ ಜಾಗೃತಿ ಧರ್ಮಸಭೆ ಉದ್ಘಾಟಿಸಿ ಮಾತನಾಡಿದ ಅವರು, ಜಗತ್ತಿನ ಇತಿಹಾಸದಲ್ಲಿ ನಮ್ಮ ಸಂಸ್ಕೃತಿ ಹಾಗೂ ಪರಂಪರೆಗೆ ವಿಶೇಷ ಸ್ಥಾನವಿದೆ. ಇದನ್ನು ಗ್ರಾಮೀಣ ಜನತೆ ಉಳಿಸಿಕೊಂಡು ಹೋಗುತ್ತಿರುವುದು ಸಂತಸದ ಸಂಗತಿ ಎಂದರು.
ಸರ್ಕಾರಿ ಯೋಜನೆಗಳು ಗ್ರಾಮೀಣ ಪ್ರದೇಶಗಳಿಗೆ ತಲುಪುವಂತಾಗಬೇಕೆಂದರಲ್ಲದೆ, ಈ ನಿಟ್ಟಿನಲ್ಲಿ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಮುಂಬರುವ ದಿನಗಳಲ್ಲಿ ಹಂಗರಗಿ ಗ್ರಾಮಕ್ಕೆ ಹೆಚ್ಚಿನ ಅನುದಾನ ನೀಡುವುದಾಗಿ
ಭರವಸೆ ನೀಡಿದರು.
ಸಾನಿಧ್ಯ ವಹಿಸಿದ್ದ ಹತ್ತಳ್ಳಿಯ ಗುರುಪಾದೇಶ್ವರ ಸ್ವಾಮೀಜಿ ಮಾತನಾಡಿ, ಪ್ರವಚನಗಳು ಹಾಗೂ ಪುರಾಣಗಳು ನಮ್ಮ ಬದುಕನ್ನು ಬದಲಾವಣೆ ಮಾಡುವ ನಿಟ್ಟಿನಲ್ಲಿ ಮಹತ್ತರ ಪಾತ್ರ ವಹಿಸುತ್ತವೆ. ಶರಣರು ಸಂತರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ನಡೆಯಬೇಕೆಂದು ಹೇಳಿದರು.
ಪ್ರಾಸ್ತವಿಕವಾಗಿ ಸಾಹಿತಿ ವಿವೇಕಾನಂದ ಕಲ್ಯಾಣ ಶೆಟ್ಟಿ ಮಾತನಾಡಿದರು.
ಬಸವನಬಾಗೇವಾಡಿಯ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಪುರಾಣ ಮಂಗಲ ನುಡಿಗಳನ್ನು ಆಡಿ ಶರಣಬಸವೇಶ್ವರ ಅವರ ದಾಸೋಹ ಕಲ್ಪನೆ ಇಂದಿಗೂ ನಮ್ಮ ಸಮಾಜದಲ್ಲಿ ಇದೆ ಎಂದು ಹೇಳಿದರು.
ಅಧ್ಯಕ್ಷತೆಯನ್ನು ದೇವಸ್ಥಾನ ಕಮಿಟಿ ಅಧ್ಯಕ್ಷ ಶಂಕರಗೌಡ ಬಿರಾದಾರ ವಹಿಸಿದ್ದರು.
ವೇದಿಕೆಯಲ್ಲಿ ಬಸವರಾಜ ಇಂಗಳೇಶ್ವರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲು ರಾಥೋಡ ,ಸಂಗಪ್ಪ ಕೋಳೂರ, ಶಿವಪ್ಪ ಇಂಗಳೇಶ್ವರ, ಸಂಗನಗೌಡ ಪಾಟೀಲ, ಪವಿತ್ರಾ ಐಗಳಿ, ನಿವೇದಿತಾ ಪತ್ತಾರ, ಹೈದರಸಾಬ್ ಚಪ್ಪರಬಂದ, ಸುರೇಶ ಮಾಮನಿ, ಸಿದ್ದು ಬಶೆಟ್ಟಿ ಇತರರು ಇದ್ದರು.
ಶಿಕ್ಷಕ ಚನ್ನಬಸವ ಬಿರಾದಾರ ಸ್ವಾಗತ ಗೀತೆ ಹಾಡಿದರು. ಕೆ. ಪಿ. ಬಶೆಟ್ಟಿ , ನಾಗನಗೌಡ ಬಿರಾದಾರ ನಿರೂಪಿಸಿದರು, ವಿನೋದ ಇಂಗಳೇಶ್ವರ ವಂದಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

