Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂಡಿ-ನಾಗಠಾಣ ಕ್ಷೇತ್ರಗಳ೨೮ಸಾವಿರ ಹೆಕ್ಟೇರ್ ಪ್ರದೇಶ ನೀರಾವರಿ
(ರಾಜ್ಯ ) ಜಿಲ್ಲೆ

ಇಂಡಿ-ನಾಗಠಾಣ ಕ್ಷೇತ್ರಗಳ೨೮ಸಾವಿರ ಹೆಕ್ಟೇರ್ ಪ್ರದೇಶ ನೀರಾವರಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ | ಶಾಸಕ ಯಶವಂತ್ರಾಯಗೌಡ ಪಾಟೀಲ ಮಾಹಿತಿ

ಇಂಡಿ: ಸತತವಾಗಿ ಬರಗಾಲಕ್ಕೆ ತುತ್ತಾಗುತ್ತಿರುವ ಇಂಡಿ ತಾಲೂಕಿಗೆ ನೀರಾವರಿ ಯೋಜನೆಗಳ ಅವಶ್ಯವಿದ್ದು ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಮೂಲಕ ಇಂಡಿ ಹಾಗೂ ನಾಗಠಾಣ ಕ್ಷೇತ್ರಗಳ ೨೮ ಸಾವಿರ ಹೆಕ್ಟೇರ್ ಪ್ರದೇಶ ನೀರಾವರಿಯಾಗಲಿದೆ ಎಂದು ಇಂಡಿ ಶಾಸಕ ಯಶವಂತ್ರಾಯಗೌಡ ಪಾಟೀಲ ಹೇಳಿದರು.
ಸೋಮವಾರ ತಾಲೂಕಿನ ಹೋರ್ತಿ ಗ್ರಾಮದಲ್ಲಿ ಕೃಷ್ಣಾ ಭಾಗ್ಯ ಜಲನಿಗಮ ನಿಯಮಿತ ಹೋರ್ತಿ-ರೇವಣಸಿದ್ದೇಶ್ವರ ಏತನೀರಾವರಿ ಯೋಜನೆಯ ಕಾರ್ಯನಿರ್ವಹಿಸುವ ಕಛೇರಿ ಉದ್ಘಾಟಿಸಿ ಅವರು ಮಾತನಾಡಿದರು.
ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಮಹಾಸ್ವಾಮಿಗಳು ಸಾವಳಸಂಗ ಗುಡ್ಡಕ್ಕೆ ಭೇಟಿ ನೀಡಿದಾಗ ಈ ಎತ್ತರದ ಪ್ರದೇಶಕ್ಕೆ ನೀರು ಹಾಯಿಸಬೇಕು ಇದರಿಂದ ಈ ಭಾಗದ ರೈತರಿಗೆ ಒಳಿತಾಗುತ್ತದೆ ಎಂಬ ಆಶಾಭಾವನೆ ಹೊಂದಿದ್ದರು. ಅವರ ಆಶಯದಂತೆ ರೇವಣಸಿಧ್ಧೇಶ್ವರ ಏತ ನೀರಾವರಿ ಮೂಲಕ ನೀರು ಹರಿಸಲಾಗುತ್ತದೆ ಎಂದರು.
ಇಂಡಿ ಕ್ಷೇತ್ರದ ೩೨ ಹಳ್ಳಿಗಳ ೨೧೫೦೦ ಹೆಕ್ಟೇರ್, ನಾಗಠಾಣ ಕ್ಷೇತ್ರದ ೧೦ ಹಳ್ಳಿಗಳ ೬೫೦೦ ಹೆಕ್ಟೇರ್ ಪ್ರದೇಶ ಈ ಯೋಜನೆಯಿಂದ ನೀರಾವರಿಯಾಗಲಿದೆ ಎಂದರು
ಇಲ್ಲಿ ಕೆಬಿಜೆಎನ್‌ಎಲ್ ಕಚೇರಿ ತೆರೆಯುವ ಉದ್ದೇಶ ನೀರಾವರಿ ಯಾವ ಹಂತದಲ್ಲಿದೆ? ಯಾವ ವಿಧದಲ್ಲಿ ಕಾರ‍್ಯಗಳು ಪ್ರಗತಿಯಲ್ಲಿವೆ ಎಂದು ರೈತಾಪಿ ವರ್ಗ ತಿಳಿದುಕೊಳ್ಳಲು ಕಛೇರಿ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಮುರಾರ್ಜಿ ವಸತಿ ಶಾಲೆಯ ಸಮೀಪ ೨ ಎಕರೆ ಸರಕಾರದ ಭೂಮಿ ಇರುವದರಿಂದ ಕೆಬಿಜೆಎನ್‌ಎಲ್ ಕಛೇರಿ ಹಾಗೂ ಹೆಲಿಪ್ಯಾಡ್ ನಿರ್ಮಿಸಲಾಗುವುದು ಎಂದರು.
ಆಲಮಟ್ಟಿ ಹಿನ್ನೀರಿನ ಕೃಷ್ಣಾ ನದಿಯ ಮೂಲಕ ಜಲಧಾರೆ ಯೋಜನೆಯಿಂದ ಕುಡಿಯುವ ನೀರಿನ ಶಾಶ್ವತ ಪರಿಹಾರ ಆಗಲಿದೆ ಎಂದು ತಿಳಿಸಿದರು.
ವಿಧಾನ ಸಭೆಯ ಅಧಿವೇಶನದಲ್ಲಿ ಇಂಡಿ ಜಿಲ್ಲೆಯಾಗಿಸಬೇಕು ಎಂದು ನಾನು ಮುಖ್ಯ ಮಂತ್ರಿಗಳಿಗೆ ಬೇಡಿಕೆ ಇಟ್ಟಿರುವೆ ಈ ನನ್ನ ಬೇಡಿಕೆಗೆ ಮುಖ್ಯ ಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.
೩೭೧ ಜೆ, ಮಾಡುವಾಗ ಜಿಲ್ಲಾ ರಾಜಕಾರಣಿಗಳು ಇಚ್ಛಾಶಕ್ತಿಯಿಂದ ಧ್ವನಿಗೂಡಿಸಿದ್ದರೆ ವಿಜಯಪುರ ಜಿಲ್ಲಾ ಕೂಡಾ ಹೈದರಾಬಾದ ಕರ್ನಾಟಕದಲ್ಲಿ ಸೇರಿ ನಮ್ಮ ಪೀಳಿಗೆಗೆ ಉದ್ಯೋಗ, ಶಿಕ್ಷಣ, ಆರ್ಥಿಕ ಅಭಿವೃದ್ದಿ ಹೊಂದಲು ಸಾಧ್ಯವಾಗುತ್ತಿತ್ತು ರಾಜಕಾರಣಿಗಳ ಇಛ್ಛಾಶಕ್ತಿಯ ಕೊರತೆಯಿಂದ ನಾವು ಕಲ್ಯಾಣ ಕರ್ನಾಟಕಕ್ಕೆ ಸೇರಲಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಮಾತನಾಡಿದರು.
ಕಾಂಗ್ರೇಸ್ ಮುಖಂಡ ಎಂ.ಆರ್ ಪಾಟೀಲ (ಬಳ್ಳೊಳ್ಳಿ) ಪ್ರಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಆಲಮಟ್ಟಿಯ ಕೆಬಿಜೆಎನ್‌ಎಲ್ ಮುಖ್ಯ ಎಂಜನೀಯರ್ ಸಿ.ಹೆಚ್. ಶ್ರೀನಿವಾಸ, ಅಧೀಕ್ಷಕ ಇಂಜನೀಯರ್ ಗೋವಿಂದ ರಾಠೋಡ, ಕಾರ್ಯಪಾಲಕ ಇಂಜನೀಯರ್ ಸಂಗಮೇಶ ಮುಂಡಾಸ, ಸಹಾಯಕ ಇಂಜನೀಯರ್ ಹಣಮಂತಪ್ಪ ಗುಡಗುಂಟ, ಮನೋಜಕುಮಾರ ಗಡಬಳ್ಳಿ, ಸೇರಿದಂತೆ ಗ್ರಾ.ಪಂ ಅಧ್ಯಕ್ಷ ಜಯಶ್ರೀ ಬೋಸಗಿ, ಉಪಾಧ್ಯಕ್ಷೆ ಚಂದ್ರಕಲಾ ಮಸಳಿಕೇರಿ, ಎಚ್.ಎನ್ ಶ್ರೀನಿವಾಸ ಮಹಾದೇವ ಪೂಜಾರಿ, ಬಿ.ಬಿ ಗುಡ್ಡದ, ಮಲ್ಲು ಬೋಸಗಿ, ಶ್ರೀಮಂತ ಇಂಡಿ, ಸಂಬಾಜಿ ಮಿಸಾಳೆ, ಸುರೇಶಗೌಡ, ಶೇಖರ ನಾಯಕ, ಎಸ್.ಆರ್ ರುದ್ರವಾಡಿ, ಸದಾಶಿವ ಪ್ಯಾಟಿ, ದಯಾನಂದ ಮಠ ಸೇರಿದಂತೆ ಅನೇಕರಿದ್ದರು.
ಜಿ.ಆರ್ ಭೋಸಗಿ ನಿರೂಪಿಸಿ, ಪಿ. ಬಮ್ಮಹಳ್ಳಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.