ವಿಜಯಪುರ: ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಡಿ.30 ಹಾಗೂ
31 ರಂದು ನಡೆಯಲಿರುವ ಪ್ರಥಮ ಜಿಲ್ಲಾ ಮಹಿಳಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನಗರದ ಹಿರಿಯ ಸಾಹಿತಿ ಭಾರತಿ ಪಾಟೀಲ ಆಯ್ಕೆಯಾಗಿದ್ದಾರೆ.
ಭಾನುವಾರ ನಗರದ ಕಸಾಪ ಭವನದಲ್ಲಿ ನಡೆದ ಕಾರ್ಯಕಾರಿ ಸಭೆಯಲ್ಲಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

