ವಿಜಯಪುರ: ಸರ್ಕಾರದ ಮಹತ್ವಾಕಾಂಕ್ಷಿಯೋಜನೆಯಾದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಯುವನಿಧಿ ಯೋಜನೆಯ ನೊಂದಣಿ ಡಿಸೆಂಬರ್ ೨೬ ರಂದು ಪ್ರಾರಂಭವಾಗಿದ್ದು ಯೋಜನೆಗೆ ಅಭ್ಯರ್ಥಿಗಳು ೨೦೨೩-೨೪ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ ೨೦೨೩ರಲ್ಲಿ ತೇರ್ಗಡೆಯಾಗಿ ಫಲಿತಾಂಶ ಪ್ರಕಟಗೊಂಡ ೧೮೦ ದಿವಸದ ಒಳಗಡೆ ಕೆಲಸ ದೊರೆಯದ ನಿರುದ್ಯೋಗ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.
ಪದವಿಧರರಿಗೆ ರೂ ೩೦೦೦ ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ ೧೫೦೦ ಗಳನ್ನು ಮಾಸಿಕ ನಿರುದ್ಯೋಗ ಭತ್ಯಯನ್ನು ನೀಡಲಾಗುವುದು. ಯುವನಿಧಿ ಯೋಜನೆಯ ಮೂಲಕ ನಿರುದ್ಯೋಗ ಭತ್ಯ ಪಡೆಯಲು ಅರ್ಜಿ ಸಲ್ಲಿಸುವವರು ೨೦೨೨-೨೩ ನೇ ಸಾಲಿನಲ್ಲಿ ಪದವಿ ಹಾಗೂ ಡಿಪ್ಲೋಮಾ ತೇರ್ಗಡೆಯಾದ ನಿರುದ್ಯೋಗ, ಯುವಕ ಹಾಗೂ ಯುವತಿಯರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ಉದ್ದಯೋಗ, ಸ್ವಯಂ ಉದ್ದಯೋಗ ಮಾಡುತ್ತಿರುವ ಅಭ್ಯರ್ಥಿಗಳು ಹಾಗೂ ಪದವಿ /ಡಿಪ್ಲೋಮಾ ಮುಗಿದ ನಂತರ ಮುಂದಿನ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಬರುವುದಿಲ್ಲ.
ಅರ್ಜಿಗಳನ್ನು sevasindhugs.karnataka.gov.in ಲಾಗಿನ್ ಆಗಿ ಅರ್ಜಿಗಳನ್ನು ಸಲ್ಲಿಸಬೇಕು. ಪದವಿ ಹಾಗೂ ಡಿಪ್ಲೋಮಾ ತೇರ್ಗಡೆಯಾದ ಅಭ್ಯರ್ಥಿಗಳ ಶೈಕ್ಷಣಿಕ ಪ್ರಮಾಣ ಪತ್ರವನ್ನು ಟಿಚಿಜ ಪೋರ್ಟಲ್‌ನಲ್ಲಿ ಸಂಬಂಧಪಟ್ಟ ವಿವಿಗಳು/ ಶೈಕ್ಷಣಿಕ ಸಂಸ್ಥೆಗಳು, ಮಂಡಳಿಗಳು ಇಂದೀಕರಿಸಿರುವುದನ್ನು ಖಚಿತಪಡಿಸಿಕೊಳ್ಳಲು nad.karnataka.gov.in/#/Yuvanidhi ಜಾಲತಾಣದದಲ್ಲಿ ಲಾಗಿನ್ ಆಗಬೇಕು ತಮ್ಮ ಪದವಿ, ಡಿಪ್ಲೋಮಾ ಪ್ರಮಾಣ ಪತ್ರದಲ್ಲಿ ನೀಡಿರುವ ನೋಂದಣಿ ಸಂಖ್ಯೆಯನ್ನು ದಾಖಲಿಸಿ ಪರಿಶೀಲಿಸಿಕೊಳ್ಳಬಹುದು. ಅರ್ಜಿಗಳನ್ನು ಕರ್ನಾಟಕ ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಸೇವಾ ಸಿಂಧು ಪೋರ್ಟಲ್‌ನಲ್ಲಿ ಲಾಗಿನ್ ಮಾಡಿಕೊಂಡು ಯುವನಿಧಿ ಯೋಜನೆಯ ಪಡೆದುಕೊಳ್ಳಬಹುದಾಗಿದೆ
ಹೆಚ್ಚಿನ ಮಾಹಿತಿಗಾಗಿ ಮಲ್ಲಿಕಾರ್ಜುನ ಸದನ ಗುರುದತ್ತ ಮಂಗಲ ಕಾರ್ಯಾಲಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸೇಷನ್ ರಸ್ತೆ ವಿಜಯಪುರ-೫೮೬೧೦೧, ದೂರವಾಣಿ ಸಂಖ್ಯೆ ೦೮೩೫೨-೨೫೦೩೮೩ ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
