ಆಲಮಟ್ಟಿ: ಇಲ್ಲಿನ ಎಸ್.ವಿ.ವಿ.ಸಂಸ್ಥೆಯ ಮಂಜಪ್ಪ ಹರ್ಡೇಕರ ಸ್ಮಾರಕ ಸಂಯುಕ್ತ ಪಪೂ ಕಾಲೇಜು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿ ಸಂತೋಷ ಗೋನಾಳ ಜಿಲ್ಲಾ ಮಟ್ಟದ ಮಿಮಿಕ್ರಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.
ಈಚೆಗೆ ಜಿಲ್ಲಾ ಪಂಚಾಯತ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಾರ್ಯಾಲಯ ವಿಜಯಪುರ ಮತ್ತು ತಿಕೋಟಾದ ಶ್ರೀ ಶಾರದಾಂಬಾ ಎಜುಕೇಶನ್ ಟ್ರಸ್ಟ್ ಇವರ ಸಹಯೋಗದಲ್ಲಿ ಆಯೋಜನೆಗೊಂಡಿದ್ದ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳ ಪ್ರತಿಭಾ ಕಾರಂಜಿ ಕಲಾ ಉತ್ಸವ-೨೦೨೩-೨೪ ಕಾರ್ಯಕ್ರಮದ ಮಿಮಿಕ್ರಿ ಸ್ಪರ್ಧೆಯಲ್ಲಿ ಸಂತೋಷ ಗೋನಾಳ ಪ್ರಥಮ ಸ್ಥಾನದೊಂದಿಗೆ ರಾಜ್ಯ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದುಕೊಂಡಿದ್ದಾನೆ. ಈ ಪ್ರತಿಭಾವಂತ ಬಾಲಕ ಎರಡು ಬಾರಿ ಜಿಲ್ಲಾ ಮಟ್ಟದ ಮಿಮಿಕ್ರಿ ಸ್ಪರ್ಧೆಯಲ್ಲಿ ವಿಜಯಶಾಲಿಯಾಗಿ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ತನ್ನ ಮಿಮಿಕ್ರಿ ಕಲಾ ಕೌಶಲ್ಯ ಪ್ರದರ್ಶಿಸಿದ್ದು ವಿಶೇಷ.
ಈ ಬಾರಿಯೂ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡು ಶಾಲೆಗೆ ಕೀರ್ತಿ ತಂದಿರುವ ಸಂತೋಷ ಗೋನಾಳ ವಿದ್ಯಾರ್ಥಿಗೆ ಸಂಸ್ಥೆಯ ಅಧ್ಯಕ್ಷರಾಗಿರುವ ಗದುಗಿನ ತೋಂಟದ ಡಾ.ಸಿದ್ದರಾಮ ಮಹಾಸ್ವಾಮಿಗಳು, ಕಾರ್ಯದರ್ಶಿ ಪ್ರೊ,ಶಿವಾನಂದ ಪಟ್ಟಣಶೆಟ್ಟರ, ಪ್ರಾಚಾರ್ಯ ಪಿ.ಎ.ಹೇಮಗಿರಿಮಠ, ಮುಖ್ಯ ಶಿಕ್ಷಕ ಎಸ್.ಆಯ್.ಗಿಡ್ಡಪ್ಪಗೋಳ, ಮಾರ್ಗದರ್ಶನ ತೋರಿದ ದೈಹಿಕ ಶಿಕ್ಷಣ ಶಿಕ್ಷಕ ಜಿ.ಎಂ.ಹಿರೇಮಠ ಸೇರಿದಂತೆ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.
ಮಂಗಳವಾರ ಶಾಲೆಯಲ್ಲಿ ವಿಶ್ರಾಂತ ಶಿಕ್ಷಕ ಭಾಂಡವಾಳಕರ ಸಮ್ಮುಖದಲ್ಲಿ ಈ ಪ್ರತಿಭಾವಂತ ಬಾಲಕನಿಗೆ ಅಭಿನಂದನೆ ಸಲ್ಲಿಸಿ ರಾಜ್ಯ ಮಟ್ಟದಲ್ಲಿಯೂ ಮಿನುಗಿ ಶಾಲೆಗೆ,ಜಿಲ್ಲೆಗೆ ಕೀರ್ತಿ ತರುವಂತೆ ಶುಭ ಹಾರೈಸಲಾಯಿತು.
ಈ ವೇಳೆ ಎಂ.ಎಚ್.ಬಳಬಟ್ಟಿ ಸೇರಿದಂತೆ ಇತರರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

