Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂಡಿ ಜಿಲ್ಲೆಗಾಗಿ ದೃಡ ಸಂಕಲ್ಪ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಇಂಡಿ ಜಿಲ್ಲೆಗಾಗಿ ದೃಡ ಸಂಕಲ್ಪ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಇಂಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ರಚನೆ ಮಾಡಿ ಘೋಷಣೆ ಮಾಡಬೇಕು ಹಾಗೂ ಮುಂದುವರೆದು ಸಂವಿಧಾನದ ವಿಧಿ 371 (ಜೆ)ಗೆ ಸೇರ್ಪಡೆಗೆ ಹಕ್ಕೊತ್ತಾಯಕ್ಕೆ ಆಗ್ರಹಿಸಿ ಇಂಡಿ ಜಿಲ್ಲಾ ಹೋರಾಟ ಸಮಿತಿ ಮತ್ತು ತಳವಾರ ಪರಿವಾರ ಸಮಾಜ ಸೇವಾ ಸಂಘದಿಂದ ಹಾಗೂ ವಿವಿಧ ಸಂಘಟನೆಗಳು ಪ್ರತಿಭಟಿಸಿ ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಅವರ ಮೂಲಕ ಮುಖ್ಯ ಮಂತ್ರಿಗಳಿಗೆ ಮಂಗಳವಾರ ಮನವಿ ಸಲ್ಲಿಸಿದರು.
ಪಟ್ಟಣದ ಪ್ರವಾಸಿ ಮಂದಿರದಿಂದ ಹಲಗೆ ಬಾರಿಸುತ್ತಾ ಘೊಷಣೆಗಳನ್ನು ಕೂಗುತ್ತಾ ಪಾದಯಾತ್ರೆ ಮೂಲಕ ಡಾ. ಬಿ ಆರ್ ಅಂಬೇಡ್ಕರ್ ವೃತಕ್ಕೆ ತೆರಳಿ ತದನಂತರ ಹೃದಯಭಾಗದ ಬಸವೇಶ್ವರ ವೃತದ ಮೂಲಕ ಹಾದು ಆಡಳಿತ ಸೌಧಕ್ಕೆ ಆಗಮಿಸಿ ಕೆಲಕಾಲ ಪ್ರತಿಭಟಿಸಿ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಜೆಟ್ಟಪ್ಪ ರವಳಿ, ಭೀಮಣ್ಣ ಕವಲಗಿ, ಪ್ರಶಾಂತ ಕಾಳೆ, ನಿರ್ಮಲಾ ತಳಕೇರಿ, ಇಲಿಯಾಸ್ ಬೋರಾಮಣಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವೀದ್ ಮೋಮಿನ ಹಾಗೂ ಮತ್ತಿತರರು ಮಾತನಾಡಿ, ಈಗಾಗಲೆ ಜಿಲ್ಲಾ ಮಟ್ಟದ ಕೆಲವು ಇಲಾಖೆಗಳು ಇಂಡಿಯಲ್ಲಿ ಕಾರ್ಯ ನಿರ್ವಹಿಸಿಸುತ್ತಿವೆ. ಅಲ್ಲದೆ ಜಿಲ್ಲೆಗೆ ಇರಬೇಕಾದ ಎಲ್ಲ ಮೂಲಭೂತ ಸೌಲಭ್ಯವನ್ನು ಇಂಡಿ ನಗರ ಹೊಂದಿದೆ. ಯೋಗ್ಯವಾದ ಭೌಗೋಳಿಕ ಪ್ರದೇಶ ಮತ್ತು ಸರಕಾರಿ ಕಚೇರಿಗಳನ್ನು ಹೊಂದಿದ್ದು ಗಡಿ ಭಾಗದ ವಿಜಯಪುರ ಜಿಲ್ಲೆಯ ಇಂಡಿಯು ಅತೀ ಹಿಂದುಳಿದ ಪ್ರದೇಶಗಲ್ಲಿ ಒಂದಾಗಿದೆ. ಅಲ್ಲದೆ ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದೆ. ಆದರೆ ಎಲ್ಲ ವಿಧದಲ್ಲೂ ಪ್ರಗತಿ ಹೊಂದಬೇಕಾದರೆ ಇಂಡಿಯು ಆಡಳಿತ್ಮಕವಾಗಿ ಜಿಲ್ಲೆ ಮಾಡಿದಾಗ ಮಾತ್ರ ಸಾಧ್ಯ ಎಂದರು.
ಬ್ರಿಟಿಷರ ಕಾಲದಿಂದೂ ಇಂಡಿಯಲ್ಲಿ ಉಪವಿಭಾಗದ ಕಛೇರಿಗಳಿವೆ. ನೂತನವಾಗಿ ರಚನೆ ಮಾಡಿರುವ ಅನ್ಯ ಜಿಲ್ಲೆಗಳಿಗೆ ಹೊಲಿಸಿದರೆ ಇಂಡಿ ಎಲ್ಲ ಚೌಕಟ್ಟಿನಲ್ಲಿ ಜಿಲ್ಲೆ ಮಾಡಲು ಸೂಕ್ತವಾಗಿದೆ. ಅಲ್ಲದೆ ನಮ್ಮ ಪಕ್ಕದಲ್ಲಿರುವ ಅಫಜಲಪುರ ತಾಲ್ಲೂಕು 371(ಜೆ) ವ್ಯಾಪ್ತಿಯಲ್ಲಿ ಬರುತ್ತದೆ. ಆದರೆ ನಾವು ಇದರಿಂದ ವಂಚಿತರಾಗಿದ್ದೇವೆ. ಆದ್ದರಿಂದ ಮುಖ್ಯಮಂತ್ರಿಗಳು ಕೂಡಲೆ ಇಂಡಿಯನ್ನು ಜಿಲ್ಲೆ ಮಾಡಲು ಆದೇಶಿಸಬೇಕು. ಒಂದು ವೇಳೆ ವಿಳಂಬ ನೀತಿ ಅನುಸರಿಸಿದ್ದಲ್ಲಿ ಉಗ್ರ ಹೊರಾಟ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ತಳವಾರ ಪರಿವಾರ ಸಮಾಜದ ಅಧ್ಯಕ್ಷ ಧರ್ಮರಾಜ ವಾಲಿಕಾರ, ತಾ.ಪಂ ಮಾಜಿ ಅಧ್ಯಕ್ಷ ಶೇಖರ ನಾಯಕ, ಅಣ್ಣಪ್ಪ ಬಿದರಕೋಟಿ, ರುಕ್ಮುದ್ದಿನ ತದ್ದೆವಾಡಿ, ಪುರಸಭೆ ಮಾಜಿ ಅಧ್ಯಕ್ಷ ಶ್ರೀಕಾಂತ್ ಕುಡಿಗನೂರ, ಹುಚ್ಚಪ್ಪ ತಳವಾರ, ಸದಾಶಿವ ಪ್ಯಾಟಿ, ಮೈಬೂಬ ಅರಬ್, ಗ್ರಾ.ಪಂ ಮಾಜಿ ಅಧ್ಯಕ್ಷ ರಾಜಶೇಖರ ಡಂಗಿ, ಜೆಟ್ಟಪ್ಪ ಮರಡಿ, ರಾಜು ಪಡಗಾನೂರ, ಮುನ್ನಾ ಡಾಂಗೆ, ಸತೀಶ್ ಕುಂಬಾರ ಹಾಗೂ ಇನ್ನೂ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.