ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ತಿಕೋಟಾ ನರ್ಸಿಂಗ್ ಕಾಲೇಜಿನ ಬಿ.ಎಸ್ಸಿ ನರ್ಸಿಂಗ್ ಎರಡನೇ ವರ್ಷದ ವಿದ್ಯಾರ್ಥಿನಿ ರಾಜೇಶ್ವರಿ ಅಗಸರ ಖೋ ಖೋ ಕ್ರೀಡೆಯಲ್ಲಿ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮಹಿಳಾ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈ ಮೂಲಕ ಯುನಿವರ್ಸಿಟಿ ಬ್ಲ್ಯೂ ಸಾಧನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ನಡೆಯಲಿರುವ ದಕ್ಷಿಣ ವಲಯ ವಿಶ್ವವಿದ್ಯಾಲಯಗಳ ಖೋ ಖೋ ಪಂದ್ಯಾವಳಿಯಲ್ಲಿ ಅವರು ವಿವಿಯನ್ನು ಪ್ರತಿನಿಧಿಸುತ್ತಿದ್ದಾರೆ. ತಮಿಳುನಾಡಿನ ತಿರುವೂರಿ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಡಿಸೆಂಬರ್ 30ರ ವರೆಗೆ ಮಹಿಳಾ ಖೋ ಖೋ ಪಂದ್ಯಾವಳಿ ನಡೆಯುತ್ತಿದ್ದು, ಈ ಪಂದ್ಯಾವಳಿಯಲ್ಲಿ ರಾಜೇಶ್ವರಿ ಅಗಸರ ಕರ್ನಾಟಕದ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸುತ್ತಿದ್ದಾರೆ.
ಈ ಮಧ್ಯೆ, ವಿವಿ ತಂಡಕ್ಕೆ ಆಯ್ಕೆಯಾದ ರಾಜೇಶ್ವರಿ ಅಗಸರ ಅವರಿಗೆ ವಿವಿ ಕುಲಪತಿ ಡಾ. ಎಂ. ಕೆ. ರಮೇಶ ಶುಭ ಹಾರೈಸಿದ್ದಾರೆ. ಅಲ್ಲದೇ, ಉಪಕುಲಸಚಿವ ಡಾ. ವಸಂತ ಶೆಟ್ಟಿ ಅವರು ಪದಕ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಿದ್ದಾರೆ.
ತಿಕೋಟಾ ನರ್ಸಿಂಗ್ ಕಾಲೇಜೀನ ವಿದ್ಯಾರ್ಥಿನಿ ರಾಜೇಶ್ವರಿ ಅಗಸರ ಅವರ ಸಾಧನೆಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ, ಕಾಲೇಜಿನ ಪ್ರಾಚಾರ್ಯರು, ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

