ಮುದ್ದೇಬಿಹಾಳ: ಪಟ್ಟಣದ ವಿದ್ಯಾನಗರದಲ್ಲಿರುವ ಹಾರ್ವರ್ಡ ಪಿ.ಯು ಸೈನ್ಸ್ ಕಾಲೇಜಿನಲ್ಲಿ ಡಿ.೨೮ ರ ಬೆಳಿಗ್ಗೆ ೧೦:೩೦ ಕ್ಕೆ ದತ್ತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ತಾಲೂಕು ಘಟಕ, ಚನ್ನಣ್ಣ ಬಸವಂತ್ರಾಯ ದೇಸಾಯಿ(ಮಡಿಕೇಶ್ವರ) ಇವರ ಸ್ಮರಣಾರ್ಥವಾಗಿ ಹಮ್ಮಿಕೊಳ್ಳಲಾದ ಈ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ದತ್ತಿ ದಾನಿಗಳಾಗಿದ್ದಾರೆ. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಧಾರವಾಡದ ಉಪ್ಪಿನ ಬೆಟಗೇರಿಯ ಮೂರುಸಾವಿರ ಮಠದ ಕುಮಾರ ವಿರೂಪಾಕ್ಷ ಮಹಾಸ್ವಾಮಿಗಳು ಸಾನಿಧ್ಯವಹಿಸಿ ಅನುಭಾವ ನೀಡಲಿದ್ದಾರೆ. ಕಾಲೇಜಿನ ಅಧ್ಯಕ್ಷ ಎಸ್.ಎಂ.ನೆರಬೆಂಚಿ ಬಸವಭಾವ ಪೂಜೆ ನೆರವೇರಿಸಲಿದ್ದು, ತಾ.ಶ.ಸಾ.ಪ ಅಧ್ಯಕ್ಷ ಬಸವರಾಜ ನಾಲತವಾಡ ನೇತೃತ್ವ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಿರಿಯ ನ್ಯಾಯವಾದಿ ಎಸ್.ಬಿ.ಬಾಚಿಹಾಳ, ದಿ ಕರ್ನಾಟಕ ಕೋ ಅಪ್ ಬ್ಯಾಂಕ್ ಅಧ್ಯಕ್ಷ ಸತೀಶ ಓಸ್ವಾಲ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲಬುರ್ಗಿ, ಉದ್ಯಮಿಗಳಾದ ಸುಧೀರ ನಾವದಗಿ, ಶರಣು ಸಜ್ಜನ, ಪುರಸಭೆ ಸದಸ್ಯ ವಿರೇಶ ಹಡಲಗೇರಿ ಸೇರಿದಂತೆ ಮತ್ತೀತರರು ಆಗಮಿಸಲಿರುವದಾಗಿ ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
