ವಿಜಯಪುರ: ಮಹಾನಗರ ಪಾಲಿಕೆ ವಾರ್ಡ್ ನಂ.35ರ ಕೌಜಲಗಿ ತಾಂಡಾದಲ್ಲಿ ಸರ್ಕಾರಿ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂ.46 ರಲ್ಲಿ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ, ನೂತನವಾಗಿ ನಿರ್ಮಿಸಲಾದ ಅಂಗನವಾಡಿ ಕಟ್ಟಡವನ್ನು ನಗರ ಶಾಸಕ ಬಸನಗೌಡ ರಾ.ಪಾಟೀಲ ಯತ್ನಾಳ ಅವರು ಉದ್ಘಾಟಿಸಿದರು.
ನಂತರ ಅಲ್ಲಿನ ನಿವಾಸಿಗಳ ಅಹವಾಲು ಆಲಿಸಿದರು. ಕೆಲ ಸಮಸ್ಯೆಗಳನ್ನು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಕರೆ ಸರಿಪಡಿಸಲು ಸೂಚಿಸಿದರು. ಇದೇ ವೇಳೆ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ರಾಜಶೇಖರ ಕುರಿಯವರ, ಮುಖಂಡರಾದ ರಾಜಕುಮಾರ ರಾಠೋಡ, ವಿಠ್ಠಲ ನಾಯಕ, ಉಮಾಜಿ ನಾಯಕ, ಜಗನ್ನಾಥ ರಾಠೋಡ, ಶಿವಾಜಿ ಚವ್ಹಾಣ, ಆನಂದ ಹಂಜಿ ಸೇರಿದಂತೆ ಶಾಲಾ ಶಿಕ್ಷಕರು, ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಸ್ಥಳೀಯ ನಿವಾಸಿಗಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

