Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 24, 2026

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026

ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೋವಿಡ್ ಜೆಎನ್.೧: ಮುನ್ನೆಚ್ಚರಿಕೆಗೆ ಡಿಸಿ ಭೂಬಾಲನ್ ಸೂಚನೆ
(ರಾಜ್ಯ ) ಜಿಲ್ಲೆ

ಕೋವಿಡ್ ಜೆಎನ್.೧: ಮುನ್ನೆಚ್ಚರಿಕೆಗೆ ಡಿಸಿ ಭೂಬಾಲನ್ ಸೂಚನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕೋವಿಡ್-೧೯ ಉಪತಳಿ ಜೆಎನ್.೧ ರಾಜ್ಯದಲ್ಲಿ ಉಲ್ಬಣಿಸುತ್ತಿರುವ ಕಾರಣ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಅಗತ್ಯವಿರುವ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಸೋಂಕು ಪತ್ತೆ, ಸೋಂಕಿತರ ಚಿಕಿತ್ಸೆ ವಿಶೇಷ ಘಟಕ, ಆಕ್ಸಿಜನ್ ಘಟಕ, ಔಷಧ ಸೇರಿದಂತೆ ಪರಿಸ್ಥಿತಿ ಎದುರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚಿಸಿದ ಅವರುಕ, ಜಿಲ್ಲಾ ಆಸ್ಪತ್ರೆಯಲ್ಲಿ ಬೆಡ್ ವ್ಯವಸ್ಥೆ, ತುರ್ತು ನಿಗಾ ಘಟಕ, ಉಪಕರಣಗಳ ಪರಿಶೀಲನೆ, ಆಕ್ಸಿಜನ್ ಸಿಲಿಂಡರ್ ಮಾಹಿತಿ, ಐಸಿಯುದಲ್ಲಿ ಇರುವ ಯಂತ್ರೋಪಕರಣಗಳು ಮತ್ತು ಔಷಧಗಳ ಲಭ್ಯತೆ ಕುರಿತು ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಅವರು ಸೂಚನೆ ನೀಡಿದ್ದಾರೆ.
ಪ್ರಸ್ತುತ ಹವಾಮಾನ, ಚಳಿ, ವಾತಾವರಣ ಇರುವುದರಿಂದ ಸೋಂಕು ತಗಲುವ ಸಾಧ್ಯತೆ ಹೆಚ್ಚಾಗುವುದರಿಂದ ಆರೋಗ್ಯ ಇಲಾಖೆ ಸೂಚನೆಗಳನ್ನು ಪಾಲಿಸಬೇಕು. ಹಿರಿಯ ನಾಗರಿಕರು, ದೀರ್ಘಕಾಲಿನ ಸಮಸ್ಯೆ ಹೊಂದಿರುವವರು, ಗರ್ಭೀಣಿಯರು, ಬಾಣಂತಿಯರು ಮನೆಯಿಂದ ಹೊರಗೆ ಹೋಗುವಾಗ, ಜನಸಂದಣಿ ಪ್ರದೇಶದಲ್ಲಿ ಮಾಸ್ಕ ಧರಿಸಬೇಕು. ಜ್ವರ, ಕೆಮ್ಮು, ನೆಗಡಿ, ಉಸಿರಾಟದ ಸಮಸ್ಯೆ ಇರುವವರು ತಕ್ಷಣ ವೈದ್ಯರ ಸಲಹೆ ಪಡೆದುಕೊಳ್ಳಬೇಕು ಈ ಕುರಿತು ಮನೆ ಮನೆಗೆ ಹೋಗಿ ಆರೋಗ್ಯ ಶಿಕ್ಷಣ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಸೂಚಿಸಿದ್ದಾರೆ.
ಸರಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕಾ ಕೇಂದ್ರಗಳ ಆಸ್ಪತ್ರೆಯಲ್ಲಿ ಆಕ್ಸಿಜನ್, ಐ.ಸಿ.ಯು ಬೇಡ್, ಕೋವಿಡ್ ಪರೀಕ್ಷೆ, ಔಷಧಿ ಹಾಗೂ ಅಂಬ್ಯೂಲೆನ್ಸ್ ಲಭ್ಯತೆ ಸೇರಿದಂತೆ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಬದ್ರೂದ್ದಿನ ಸೌದಾಗರ, ಡಬ್ಲೂಎಚ್‌ಓ ಸರ್ವೇಲೆನ್ಸ್ ಅಧಿಕಾರಿ ಡಾ. ಮುಕುಂದ ಗಲಗಲಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಕವಿತಾ ದೊಡಮನಿ, ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ಕೆ.ಡಿ.ಗುಂಡಬಾವಡಿ, ಜಿಲ್ಲಾ ಆಸ್ಪತ್ರೆಯ ಆರ್‌ಎಂಓ ಅಧಿಕಾರಿಗಳು, ಬಿಎಲ್‌ಡಿಇ ಸಂಸ್ಥೆಯ ವೈದ್ಯರು, ಖಾಸಗಿ ಆಸ್ಪತ್ರೆ ವೈದ್ಯರು, ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ|| ಬಸವರಾಜ ಹುಬ್ಬಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 24, 2026

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026

ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 24, 2026
    In ದಿನಪತ್ರಿಕೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026
    In ದಿನಪತ್ರಿಕೆ
  • ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
  • ಶ್ರೀ ದತ್ತ ಇಂಡಿಯಾ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ 12,000 ಟಿಸಿಡಿಗೆ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಸ್ಕೌಟ್ಸ್ & ಗೈಡ್ಸ್ ಸಂಸ್ಥೆಗೆ ರಾಜ್ಯ ಪದಾಧಿಕಾರಿಗಳ ಭೇಟಿ
    In (ರಾಜ್ಯ ) ಜಿಲ್ಲೆ
  • ಜು..೨೬ ರಂದು ಕಾರ್ಗಿಲ್ ವಿಜಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕ ಅನಿಲ್ ಅಧಿಕಾರ ದುರ್ಬಳಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.