Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉದ್ದೇಶಿತ ಫುಡ್ ಪಾರ್ಕ ಸ್ಥಳಕ್ಕೆ ಸಿಇಓ ಶಿಂಧೆ ಭೇಟಿ
(ರಾಜ್ಯ ) ಜಿಲ್ಲೆ

ಉದ್ದೇಶಿತ ಫುಡ್ ಪಾರ್ಕ ಸ್ಥಳಕ್ಕೆ ಸಿಇಓ ಶಿಂಧೆ ಭೇಟಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅವರು ಡಿ.೨೭ರ ಬುಧವಾರದಂದು ತಿಕೋಟಾ ತಾಲೂಕಿನ ಲೋಹಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಟ್ಟಂಗಿಹಾಳ ಗ್ರಾಮದ ಫುಡ್ ಪಾರ್ಕ್ ಅಭಿವೃದ್ಧಿಗಾಗಿ ಕಾಯ್ದಿರಿಸಿದ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಫುಡ್ ಪಾರ್ಕ್ ಅಭಿವೃದ್ಧಿಗಾಗಿ ಸುಮಾರು ೭೫ ಎಕರೆ ಭೂಮಿಯನ್ನು ಕರ್ನಾಟಕ ಆಹಾರ ನಿಯಮಿತ (ಫುಡ್ ಕರ್ನಾಟಕ ಲಿ.) ಸಂಸ್ಥೆಗೆ ಮೀಸಲಿಡಲಾಗಿದೆ. ಇಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳಿಗೆ ಅವಕಾಶ ನೀಡಲಾಗುತ್ತದೆ. ಮೊದಲನೇ ಹಂತದಲ್ಲಿ ೨೫ ಎಕರೆ ಭೂಮಿಯನ್ನು ಅಭಿವೃದ್ಧಿಪಡಿಸಿ ಇಂಡಸ್ಟ್ರಿಯಲ್ ಫ್ಲಾಟ್‌ಗಳನ್ನು ತಯಾರಿಸಲಾಗುತ್ತದೆ. ಹಾಗೂ ಕೃಷಿ ಕೈಗಾರಿಕೆ ಮಾಡುವವರಿಗೂ ಸಹ ಅವಕಾಶ ನೀಡಲಾಗುತ್ತದೆ. ಎರಡನೇ ಹಂತದಲ್ಲಿ ಕೋಲ್ಡ್ ಸ್ಟೋರೇಜ್ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಪಡಿಸುವುದು ಮತ್ತು ಮೂರನೇ ಹಂತದಲ್ಲಿ ಒಳಚರಂಡಿ ಸಂಸ್ಕರಣಾ ಘಟಕ ಬಳಸಿದ ನೀರನ್ನು ಮರು ಬಳಕೆ ಮಾಡುವ ಉದ್ದೇಶದಿಂದ ಶುದ್ಧೀಕರಣ ಘಟಕ ನಿರ್ಮಾಣ ಮಾಡಲಾಗುತ್ತದೆ. ಹೀಗೆ ಮೂರು ಹಂತಗಳಲ್ಲಿ ಈ ಫುಡ್ ಪಾರ್ಕ್ ಅಭಿವೃದ್ಧಿಗೆ ಯೋಜನೆ ಸಿದ್ಧಪಡಿಸಲಾಗಿದೆ. ಪ್ರಸ್ತುತದಲ್ಲಿ ರಸ್ತೆ ಸಂಪರ್ಕ, ಚರಂಡಿ ವ್ಯವಸ್ಥೆ, ನೀರು ಸರಬರಾಜು ಹಾಗೂ ವಿದ್ಯುತ್ ಸರಬರಾಜು ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದೆ. ಇದನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮುಖಾಂತರ ಅಭಿವೃದ್ಧಿ ಪಡಿಸಲು ಯೋಜನೆಯು ನಗರ ಯೋಜನಾ ಅನುಮೋದನೆ ಹಂತದಲ್ಲಿರುತ್ತದೆ.
ಈ ಸಂದರ್ಭದಲ್ಲಿ ಅಲ್ಲಿನ ಸ್ಥಿತಿಗತಿ ಹಾಗೂ ಸದರಿ ಕಾಮಗಾರಿಯನ್ನು ಕಡಿಮೆ ಸಮಯದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸುವ ವಿಧಾನದ ಕುರಿತು ಚರ್ಚೆ ನಡೆಸಿದರು. ಈ ಕಾಮಗಾರಿಗೆ ಸಂಪರ್ಕ ಹೊಂದುವ ಎರಡು ರಸ್ತೆಗಳನ್ನು ಅಭಿವೃದ್ಧಿಪಡಿಸಲು ಹಾಗೂ ಹತ್ತಿರದ ಭೂತನಾಳ ಕೆರೆಯ ಮುಖಾಂತರ ನೀರು ಸರಬರಾಜು ಮಾಡುವುದು, ವಿದ್ಯುತ್ ಸರಬರಾಜು ಮಾಡುವ ಕುರಿತು ಆಯಾ ಇಲಾಖಾ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು. ಸ್ಥಳದ ಸುತ್ತ ಮುತ್ತಲಿನ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ಕೃಷಿ ಉತ್ಪನ್ನಗಳ ರಫ್ತಿನ ಕುರಿತು ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಕೃಷಿ ಆಧಾರಿತ ಕೈಗಾರಿಕೆ ಅಭಿವೃದ್ಧಿಪಡಿಸುವ ಯೋಜನೆಯನ್ನು ರೂಪುಗೊಳಿಸುವ ಕುರಿತು ಪಾವರ್ ಪಾಯಿಂಟ್ ಪ್ರೆಸೆಂಟೇಶನ್ ಸಿದ್ಧಪಡಿಸಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ದಿ ಸಚಿವರಾದ ಎಂ.ಬಿ. ಪಾಟೀಲ ರವರ ಅಧ್ಯಕ್ಷತೆಯಲ್ಲಿ ಜರುಗಲಿರುವ ಸಭೆಯಲ್ಲಿ ಪ್ರಸ್ತುತ ಪಡಿಸಲು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ಪ್ರಶಾಂತ ಬಾರಿಗಿಡದ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಾಜಶೇಖರ ಆ.W, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ರಾಹುಲ್ ಭಾವಿದೊಡ್ಡಿ, ತಿಕೋಟಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವರಾಜ ಐನಾಪುರ, ವಲಯ ಅರಣ್ಯಾಧಿಕಾರಿ ಗಿರೀಶ ಹಲಕುಡೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಪಾಟೀಲ, ಹೆಸ್ಕಾಂ ಇಲಾಖೆಯ ವಿಭಾಗಾಧಿಕಾರಿಗಳಾದ ಬಿ.ಓ. ರಾಠೋಡ, ಲೋಹಗಾಂವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಪದ್ಮಿನಿ ಬಿರಾದಾರ, ಲೋಹಗಾಂವ ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.