ವಿಜಯಪುರ: ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇದೇ ಡಿಸೆಂಬರ್ 29 ಶುಕ್ರವಾರದಂದು ಮಧ್ಯಾನ್ಹ 3 ಕ್ಕೆ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಗುರುನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಮಧ್ಯಾನ್ಹ 3ಕ್ಕೆ ಗ್ರಾಮದ ಕಲ್ಲಯಾರೂಢ ಮಠದಿಂದ
ಪೂಜ್ಯಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಭಾವಚಿತ್ರ ಜೊತೆಗೆ ಪುಸ್ತಕ ಕಟ್ಟುಗಳ ಮೆರವಣಿಗೆ ಆರಂಭವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗುವದು.
ಸಂಜೆ 5 ಗಂಟೆಗೆ ಶ್ರೀ ಮಲ್ಲಿಕಾರ್ಜುನ ಶಾಲಾ ಆವರಣದಲ್ಲಿ ಗುರುನಮನ ಕಾರ್ಯಕ್ರಮ ಜರುಗಲಿದ್ದು, ನಾಗಠಾಣದ ಉದಯೆಶ್ವರ ಮಠದ ಶ್ರೀ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು ದಿವ್ಯ ಸಾನಿಧ್ಯ ಮತ್ತು ಕಲ್ಲಯಾರೂಢ ಮಠದ ಶ್ರೀ ಪ್ರಜ್ಞಾನಂದ ಮಹಾಸ್ವಾಮಿಗಳು ಸಾನಿಧ್ಯ ವಹಿಸುವರು. ಹಿರೇರೂಗಿ ಯುಬಿಎಸ್ ಶಾಲಾ ಶಿಕ್ಷಕ ಸಂತೋಷ ಬಂಡೆ ಗುರುನಮನ ಸಲ್ಲಿಸುವರು. ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಅಧ್ಯಕ್ಷತೆ ವಹಿಸುವರು. ಸಂಸ್ಥೆಯ ಕಾರ್ಯದರ್ಶಿ ಸುನಂದಾ ಹುಣಶ್ಯಾಳ, ಶಾಲಾ ಮುಖ್ಯ ಶಿಕ್ಷಕ ಸುರೇಶಗೌಡ ಬಿರಾದಾರ, ಶಿಕ್ಷಕರು, ಪಾಲಕರು, ಗ್ರಾಮಸ್ಥರು, ಮಕ್ಕಳು ಉಪಸ್ಥಿತರಿರುವರು.
ಮಕ್ಕಳಿಂದ ಪೂಜ್ಯಶ್ರೀಗಳ ಕುರಿತು ನಾಟಕ-ಹಾಡು ಜೊತೆಗೆ ದೀಪಗಳ ಪ್ರಜ್ವಲನ ನಂತರ ಮಹಾಪ್ರಸಾದ ಇರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಗ್ರಾಮಸ್ಥರು ಭಾಗವಹಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

