ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಬಿಬಿಎ ವಿಭಾಗವು ಡಿಸೆಂಬರ್ 29 ರಂದು ಶುಕ್ರವಾರ ಜಿಲ್ಲಾ ಮಟ್ಟದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗಾಗಿ ಮಂಚ್-ಮಚ್ಚಾ ವೃತ್ತಿಪರ ಸ್ಪರ್ಧೆಯನ್ನು ಆಯೋಜಿಸಿದೆ.
ಬಿ.ಎಲ್.ಡಿ.ಇ ಸಂಸ್ಥೆಯ ಹೊಸ ಆವರಣದಲ್ಲಿರುವ ಬಿಬಿಎ ಕಾಲೇಜಿನಲ್ಲಿ ಬೆಳಿಗ್ಗೆ 8.30ಕ್ಕೆ ಪ್ರಾರಂಭವಾಗಲಿರುವ ಈ ಕಾರ್ಯಕ್ರಮದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ಆರ್. ಬಿ. ಕೊಟ್ನಾಳ, ಆಡಳಿತಾಧಿಕಾರಿ ಪ್ರೊ. ಕೆ. ಜಿ. ಪೂಜಾರಿ ಉಪಸ್ಥಿತರಿರಲಿದ್ದಾರೆ.
ಈ ವೃತ್ತಿಪರ ಸ್ಪರ್ಧೆಯಲ್ಲಿ ರ್ಯಾಂಪ್ ವಾಕ್, ಟೀಮ್ ಬಿಲ್ಡಿಂಗ್, ರಸಪ್ರಶ್ನೆ, ಅಡುಗೆ, ಛಾಯಾಚಿತ್ರ ಸ್ಪರ್ಧೆಗಳನ್ನು ನಡೆಸಲಾಗುವುದು. ಇದರಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಒಟ್ಟು ರೂ. 20 ಸಾವಿರ ನಗದು ಬಹುಮಾನ ನೀಡಲಾಗುವುದು. ಇದರಲ್ಲಿ ಭಾಗವಹಿಸುವ ಪಿಯುಸಿ ವಿದ್ಯಾರ್ಥಿಗಳು ಡಿಸೆಂಬರ್ 29 ರಂದು ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಮಹಾವಿದ್ಯಾಲಯದಲ್ಲಿ ಉಪಸ್ಥಿತರಿಬೇಕು ಎಂದು ಕಾರ್ಯಕ್ರಮದ ಸಂಯೋಜಕರಾದ ಡಾ. ವರ್ಷಾ ದೇಸಾಯಿ ಮತ್ತು ಡಾ. ಲಕ್ಷಣ ಪವಾರ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿ ಸಂಯೋಜಕ ಸಲೀಂ ನದಾಫ್ ಮೊ. ಸಂ. 6364559796 ಇವರನ್ನು ಸಂಪರ್ಕಿಸಬಹುದಾಗಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
