ಸಿಂದಗಿ: ಕರ್ನಾಟಕ ರಾಜ್ಯದಲ್ಲಿ ಐತಿಹಾಸಿಕ ಮತ್ತು ಸಂಸ್ಕೃತಿಕವಾಗಿ ಹೆಸರುವಾಸಿಯಾಗಿರುವ ವಿಜಯಪುರ ಜಿಲ್ಲೆಯು ಬಹುದೊಡ್ಡ ಜಿಲ್ಲೆಯಾಗಿದ್ದು, ಈಗ ವಿಭಜಿಸಿ ಒಂದು ಹೊಸ ಜಿಲ್ಲೆಯಾಗಬೇಕು ಎಂಬ ಕೂಗು ಕೇಳಿ ಬರುತ್ತಿದೆ. ವಿಜಯಪುರ ಜಿಲ್ಲೆ ವಿಭಜಿಸಿ ಹೊಸ ಜಿಲ್ಲೆ ಮಾಡುವುದಾದರೆ ಸಿಂದಗಿ ತಾಲೂಕು ಹೊಸ ಜಿಲ್ಲೆಯಾಗಲಿ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವಿಜಯಪುರ ಜಿಲ್ಲೆ ಹಾಗೂ ಸಿಂದಗಿ ತಾಲೂಕು ಘಟಕಗಳ ಮೂಲಕ ಅಗ್ರಹಿಸಲಾಗುತ್ತಿದೆ ಎಂದು ದಲಿತ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಸಂಚಾಲಕ ವಾಯ್.ಸಿ ಮಯೂರ ತಿಳಿಸಿದ್ದಾರೆ.
ಈ ಕುರಿತು ಗುರುವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು, ಸಿಂದಗಿ ತಾಲೂಕು ವಿಜಯಪುರ ಜಿಲ್ಲೆಯ ಎಲ್ಲಾ ತಾಲೂಕುಗಳಿಗಿಂತ ಜನಸಂಖ್ಯೆಯಲ್ಲಿ ದೊಡ್ಡದಾಗಿದೆ. ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದೆ. ಆರ್.ಟಿ.ಓ. ಕಛೇರಿಯಲ್ಲಿ ವಾಹನ ನೊಂದಣಿಯಲ್ಲಿ ಸಿಂದಗಿ ಮುಂದಿದೆ. ಭೌಗೋಳಿಕವಾಗಿ ಕೇಂದ್ರ ಸ್ಥಾನದಲ್ಲಿದೆ. ಈ ಎಲ್ಲಾ ವಿಷಯಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಸಿಂದಗಿ ತಾಲೂಕನ್ನು ನೂತನ ಜಿಲ್ಲೆಯಾಗಿ ಸರಕಾರ ಘೋಷಣೆ ಮಾಡಬೇಕೆಂದು ಆಗ್ರಹಿಸಿ ಜಿಲ್ಲಾ ಸಂಚಾಲಕ ವಾಯ್.ಸಿ.ಮಯೂರ, ತಾಲೂಕ ಸಂಚಾಲಕ ಶರಣು ಛಲವಾದಿ, ಸಂಘಟನಾ ಸಂಚಾಲಕ ನೀಲಕಂಠ ಹೊಸಮನಿ, ಶಿವಪುತ್ರ ಮೇಲಿನಮನಿ, ಪರಶುರಾಮ ಹೊಸಮನಿ, ಜೈಭೀಮ ತಳಕೇರಿ, ಸುನೀಲ ಸುಂಗಠಾಣ ಪತ್ರಿಕಾ ಹೇಳಿಕೆ ನೀಡಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

