ಸಿಂದಗಿ: ಇಂಡಿ ಉಪವಿಭಾಗ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಡಿ.೨೯ರಂದು ಸಾಯಂಕಾಲ ೫ಗಂಟೆಗೆ ತಾಲೂಕು ಪಂಚಾಯತ್ ಸಭಾಭವನದಲ್ಲಿ ವಿಜಯಪುರ ಜಿಲ್ಲೆಯ ಇಂಡಿ ತಾಲೂಕನ್ನು ಜಿಲ್ಲಾ ಕೇಂದ್ರವನ್ನಾಗಿ ಸೃಜಿಸುವ ಬಗ್ಗೆ ಅಭಿಪ್ರಾಯ ಸಂಗ್ರಹಣೆಗಾಗಿ ತಾಲೂಕಿನ ಜನಪ್ರತಿನಿದಿಗಳು, ಗಣ್ಯರು, ಸಾಹಿತಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಮಾಧ್ಯಮ ಮಿತ್ರರು ಸದರಿ ಸಭೆಗೆ ಹಾಜರಿರಬೇಕು ಎಂದು ತಾಲೂಕು ದಂಡಾಧಿಕಾರಿ ಪ್ರದೀಪಕುಮಾರ ಹಿರೇಮಠ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ*
ಅದೇ ಸಭಾಭವನದಲ್ಲಿ ಶಾಸಕ ಅಶೋಕ ಮನಗೂಳಿ ಅಧ್ಯಕ್ಷತೆಯಲ್ಲಿ ಸಾಯಂಕಾಲ ೪ಗಂಟೆಗೆ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ. ಕಾರಣ ತಾಲೂಕು ಮಟ್ಟದ ಅಧಿಕಾರಿಗಳು, ಕವಿಗಳು, ಸಾಹಿತಿಗಳು, ಕನ್ನಡಪರ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಬೇಕು ಎಂದು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
