ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ೨೧ನೇ ಅವಧಿಗೆ ಮಹಾಪೌರ ಹಾಗೂ ಉಪಮಹಾಪೌರ ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ಜನವರಿ ೯ರಂದು ಚುನಾವಣೆ ನಡೆಸಲು ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಅಧ್ಯಕ್ಷಾಧಿಕಾರಿಗಳಾದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ದಿನಾಂಕ ನಿಗದಿಗೊಳಿಸಿದ್ದಾರೆ.
ವಿಜಯಪುರ ಮಹಾನಗರ ಪಾಲಿಕೆಯ ಮಹಾಪೌರ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪ ಮಹಾಪೌರ ಸ್ಥಾನ ಪರಿಶಿಷ್ಟ ಪಂಗಡ ವರ್ಗಕ್ಕೆ ಮೀಸಲಿರಿಸಲಾಗಿದೆ. ಚುನಾವಣಾ ವೇಳಾಪಟ್ಟಿಯಂತೆ ದಿ.೦೯-೦೧-೨೦೨೪ರಂದು ಬೆಳಿಗ್ಗೆ ೯ ರಿಂದ ೧೧ ಗಂಟೆಯವರೆಗೆ ನಾಮಪತ್ರಗಳನ್ನು ಸ್ವೀಕರಿಸುವುದು. ಮಧ್ಯಾಹ್ನ ೧ ಗಂಟೆಗೆ ಸಭೆ ಆರಂಭ, ಮಧ್ಯಾಹ್ನ ೧ ಗಂಟೆಯ ನಂತರ ಮಹಾಪೌರ, ಉಪಮಹಾಪೌರ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ, ಪ್ರಮಾಣ ವಚನ, ಹಾಜರಾತಿ, ಕೋರಂ ಪರಿಶೀಲನೆ, ನಾಮಪತ್ರಗಳ ಪರಿಶೀಲನೆ, ಕ್ರಮಬದ್ಧ ನಾಮಪತ್ರಗಳ ಘೋಷಣೆ, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವುದು, ಉಮೇದುವಾರರ ಪಟ್ಟಿ ಘೋಷಣೆ, ಅವಿರೋಧ ಆಯ್ಕೆಯಾದಲ್ಲಿ ಫಲಿತಾಂಶ ಘೋಷಣೆ, ಚುನಾವಣೆ ಅಗತ್ಯವಿದ್ದಲ್ಲಿ ಕೈ ಎತ್ತುವ ಮೂಲಕ ಮತದಾನ ಹಾಗೂ ಮತಗಳ ಏಣಿಕೆ ಹಾಗೂ ಫಲಿತಾಂಶ ಘೋಷಣೆ ಪ್ರಕ್ರಿಯೆ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
