ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ ವತಿಯಿಂದ ಡಾ.ಅಂಬೇಡ್ಕರ್ ಓದು ಎಂಬ ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆಗಳ ಕುರಿತು ವಿಶೇಷ ಡಿ.೨೮ರಂದು ನಗರದ ದರಬಾರ ಶಾಲೆಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ವಿದ್ಯಾವರ್ಧಕ ಸಂಘದ ಸಂಯೋಜನಾಧಿಕಾರಿ ಡಾ.ವಿ.ಬಿ.ಗ್ರಾಮಪುರೋಹಿತ ಅವರು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿ, ಡಾ.ಅಂಬೇಡ್ಕರ್ ಅವರಲ್ಲಿನ ಓದಿನ ಹಂಬಲ ಇಂದಿನ ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಟಿ.ಆರ್.ಕುಲಕರ್ಣಿ ಅವರು ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಜಗತ್ತಿನಲ್ಲಿಯೇ ಶ್ರೇಷ್ಠವಾಗಿದೆ. ಈ ಸಂವಿಧಾನಕ್ಕನುಗುಣವಾಗಿ ನಡೆಯುವ ಮೂಲಕ ದೇಶವನ್ನು ಅಭಿವೃದ್ದಿಪಥದತ್ತ ಕೊಂಡೊಯ್ಯೋಣ ಎಂದು ಅವರು ಹೇಳಿದರು.
ವಿಶೇಷ ಉಪನ್ಯಾಸ ನೀಡಿದ ಎ.ನಾಗರಾಜ ಅವರು ಮಾತನಾಡಿದರು.
ಪ್ರಾಸ್ತಾವಿಕವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ್ ಅವರು ಮಾತನಾಡಿ ಸ್ವಾಗತಿಸಿದರು. ವಿ.ಬಿ.ಕುಲಕರ್ಣಿ ವಂದಿಸಿದರು. ಜಿ.ಬಿ.ಕುಲಕರ್ಣಿ ನಿರೂಪಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

