ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಡಿ.೨೯ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟçಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೧೦-೩೦ಕ್ಕೆ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ (ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್.ನಾಡಗೌಡ, ವಿಠ್ಠಲ ಕಟಕದೊಂಡ, ಭೀಮನಗೌಡ(ರಾಜುಗೌಡ) ಬಸನಗೌಡ ಪಾಟೀಲ, ಅಶೋಕ ಮಲ್ಲಪ್ಪ ಮನಗೂಳಿ, ವಿಶೇಷ ಉಪನ್ಯಾಸಕರಾಗಿ ಶ್ರೀಮತಿ ಪೂಜಾ ಕೆ.ಎಸ್. ಹಾಗೂ ಕುಮಾರಿ ರಕ್ಷಂದಾ ತಿಳಗೊಳ ಅವರು ಕನ್ನಡ ಗೀತೆಗಳ ಗಾಯನ ಮಾಡಲಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
