Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಮಫಲಕಗಳಲ್ಲಿ ಶೇ.60 ಕನ್ನಡ ಭಾಷೆ ಬಳಕೆ ಕಡ್ಡಾಯ
(ರಾಜ್ಯ ) ಜಿಲ್ಲೆ

ನಾಮಫಲಕಗಳಲ್ಲಿ ಶೇ.60 ಕನ್ನಡ ಭಾಷೆ ಬಳಕೆ ಕಡ್ಡಾಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಎಂ ಸಿದ್ದರಾಮಯ್ಯ ಘೋಷಣೆ | ಫೆ.28 ರವರೆಗೆ ಗಡುವು | ಕಾನೂನು ಸುವ್ಯವಸ್ಥೆ ಕಾಪಾಡಲು ಮನವಿ

ಬೆಂಗಳೂರು: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳ ನಾಮ ಫಲಕದಲ್ಲಿ ಶೇ.60 ಕನ್ನಡ ಭಾಷೆಯಲ್ಲಿ ಇರಬೇಕೆಂದು ಗಡುವು ನೀಡಲಾಗುವುದು. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ನಾಮಫಲಕ ಅಳವಡಿಸುವ ಕುರಿತು ಗುರುವಾರ ನಡೆದ ಉನ್ನತ ಮಟ್ಟದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ ಪ್ರಕಾರ ಸರ್ಕಾರದ ಅಥವಾ ಸ್ಥಳೀಯ ಪ್ರಾಧಿಕಾರದ ಅನುಮೋದನೆಯೊಂದಿಗೆ ನಡೆಸುತ್ತಿರುವ ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ ಮುಂತಾದವುಗಳ ಹೆಸರನ್ನು ಪ್ರದರ್ಶಿಸುವ ಫಲಕಗಳ ಮೇಲಿನ ಅರ್ಧ ಭಾಗವು ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿದೆ ಎಂದರು.
ಈ ಕಾಯ್ದೆಯ ನಿಯಮ 17(8) ರಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲ ಫಲಕಗಳಲ್ಲಿ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿ ಇರತಕ್ಕದ್ದು ಎಂದಿದೆ. ಜಾಹೀರಾತುಗಳ ವರ್ಗೀಕರಣ ಮತ್ತು ಕನ್ನಡದಲ್ಲಿ ಪ್ರದರ್ಶಿಸಬೇಕಾದ ಜಾಹೀರಾತು ವಿಷಯಗಳ ಶೇಕಡಾವಾರು ಪ್ರಮಾಣವು ರಾಜ್ಯ ಸರ್ಕಾರದಿಂದ ನಿಯಮಿಸಲಾದಂತೆ ಇರತಕ್ಕದ್ದು ಎಂದು ತಿಳಿಸಲಾಗಿದೆ. ಇದನ್ನು ಸಹ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ಶಾಂತಿಯುತವಾದ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ. ನಮಗೆ ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇದೆ. ಆದರೆ ಕಾನೂನಿಗೆ ವಿರುದ್ಧವಾಗಿ ಯಾರಾದರೂ ನಡೆದುಕೊಂಡರೆ ಅದನ್ನು ಸರ್ಕಾರ ಸಹಿಸುವುದಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳ ಬಯಸುತ್ತೇನೆ. ಪ್ರತಿಭಟನೆಗಳನ್ನು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತ್ರ ನಡೆಸಬೇಕು ಎಂದು 2022ರಲ್ಲಿ ಹೈಕೋರ್ಟ್ ಆದೇಶಿಸಿದೆ. ರಾಜ್ಯ ಸರ್ಕಾರ ಇದನ್ನು ಖಾತರಿಪಡಿಸಬೇಕು ಎಂದು ಸ್ಪಷ್ಟವಾದ ಆದೇಶ ಹೊರಡಿಸಿದೆ.
ಸಂಘಟನೆಯಿರಲಿ, ವ್ಯಕ್ತಿಗಳಿರಲಿ, ಖಾಸಗಿ ಸಂಸ್ಥೆಗಳಿರಲಿ ಯಾರೇ ಆಗಲಿ ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.