Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಶ್ವ ಮಾನವ ಪ್ರಜ್ಞೆ ಬೆಳೆಸಿಕೊಳ್ಳಬೇಕು :ಎಡಿಸಿ ಮುರಗಿ
(ರಾಜ್ಯ ) ಜಿಲ್ಲೆ

ವಿಶ್ವ ಮಾನವ ಪ್ರಜ್ಞೆ ಬೆಳೆಸಿಕೊಳ್ಳಬೇಕು :ಎಡಿಸಿ ಮುರಗಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಿಲ್ಲಾಡಳಿತ ವತಿಯಿಂದ ರಾಷ್ಟ್ರಕವಿ ಕುವೆಂಪು ಜನ್ಮದಿನ ಪ್ರಯುಕ್ತ ವಿಶ್ವಮಾನವ ದಿನಾಚರಣೆ

ವಿಜಯಪುರ: ಜ್ಞಾನಪೀಠ ಪುರಸ್ಕೃತ ಕನ್ನಡದ ಮೊದಲ ಸಾಹಿತಿ, ಕನ್ನಡ ನಾಡು-ನುಡಿಗೆ ತಮ್ಮ ಜೀವನವ ಮುಡಿಪಾಗಿಟ್ಟು, ಕನ್ನಡ ಸಾಹಿತ್ಯ ಲೋಕದ ದಿಗ್ಗಜ, ರಾಷ್ಟ್ರ ಕವಿ, ವಿಶ್ವ ಮಾನವರಾಗಿ ರಾಷ್ಟ್ರದಲ್ಲಿ ತಮ್ಮ ಸಾಹಿತ್ಯ ಸಂಚಲನದಿಂದ ಮೆರಗು ನೀಡಿ ರಾಷ್ಟ್ರ ಕವಿ ಎನಿಸಿಕೊಂಡವರು ಕುವೆಂಪು ಅವರು ಮಾತ್ರ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮಾತನಾಡಿದ ಅವರು, ಕುವೆಂಪು ಅವರು ೨೦ನೇ ಶತಮಾನ ಕಂಡ ದೈತ್ಯ ಪ್ರತಿಭೆ. ಅವರೊಬ್ಬ ರಸಋಷಿ. ತಮ್ಮ ಮೇರು ಕೃತಿ ‘ಶ್ರೀ ರಾಮಾಯಣ ದರ್ಶನಂ’ನಲ್ಲಿ ಈ ಕಾಲಕ್ಕೆ ಅಗತ್ಯವಾದ ದರ್ಶನವನ್ನು ನೀಡಿದ್ದು, ಇಂದಿಗೂ ಅವರ ಸಾಹಿತ್ಯ ಕೃತಿಗಳು ಪ್ರಸ್ತುತದಲ್ಲಿವೆ. ಅವರ ಎರಡು ಬೃಹತ್ ಕಾದಂಬರಿಗಳಾದ ‘ಕಾನೂರು ಹೆಗ್ಗಡತಿ’ ಹಾಗೂ ‘ಮಲೆಗಳಲ್ಲಿ ಮದುಮಗಳು’ ಅವರನ್ನು ಜಗತ್ತಿನ ಮಹಾನ್ ಕಾದಂಬರಿಕಾರರ ಸಾಲಿನಲ್ಲಿ ನಿಲ್ಲುವಂತೆ ಮಾಡಿದ್ದು, ಅವರ ನಾಟಕಗಳಿಗೆ ವೈಚಾರಿಕತೆಯ ಸ್ಪರ್ಶವಿದೆ ಎಂದು ಹೇಳಿದರು.
ಇಂದು ರಾಷ್ಟ್ರ ಕವಿ ಕುವೆಂಪು ಅವರ ಜನ್ಮ ದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ಹಮ್ಮಿಕೊಂಡಿದ್ದು, ಪ್ರತಿವರ್ಷ ಅವರಿಗೆ ಗೌರವ ನಮನ ಸಲ್ಲಿಸುವುದಷ್ಟೇ ಅಲ್ಲದೇ ಕನ್ನಡ ಸಾಹಿತ್ಯವನ್ನು ಓದುವ ಮೂಲಕ ಅವರ ವಿಚಾರಧಾರೆಗಳನ್ನು ಮೆಲುಕು ಹಾಕಬೇಕು ಅಂದಾಗ ಮಾತ್ರ ಅವರಿಗೆ ಸ್ಮರಿಸಿದ ಸ್ಮರಣೆ ಸಾರ್ಥಕವಾಗುವುದು. ಪ್ರತಿಯೊಬ್ಬರು ವಿಶ್ವ ಮಾನವ ಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ವಿಶೇಷ ಉಪನ್ಯಾಸ ನೀಡಿದ ಪೂಜಾ ಕೆ. ಎಸ್. ಅವರು ಮಾತನಾಡಿ, ಕುವೆಂಪು ಅವರು ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು ಎಂದರು.
ಜಿಲ್ಲಾ ವಿಕಲ ಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಅಧಿಕಾರಿಗಳಾದ ರಾಜಶೇಖರ ದೈವಾಡಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಚುನಾವಣಾ ತಹಶೀಲ್ದಾರರಾದ ಪ್ರೇಮಸಿಂಗ್ ಪವಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ್, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಅನುಸೂಯಾ ಚಲವಾದಿ, ವಿದ್ಯಾವತಿ ಅಂಕಲಗಿ, ಅಡಿವೆಪ್ಪ ಸಾಲಗಲ್, ಗಿರೀಶ ಕುಲಕರ್ಣಿ, ಭೀಮರಾಯ ಜಿಗಜಿಣಗಿ, ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು. ರಕ್ಷಂದಾ ತಿಳಗೊಳ ಕುವೆಂಪು ಅವರ ಸುಮಧುರವಾದ ಗೀತೆಗಳನ್ನು ಪ್ರಸ್ತುತಪಡಿಸಿದರು. ಎಚ್. ಮಮದಾಪುರ ಕಾರ್ಯಕ್ರಮದ ನಿರೂಪಣೆ ಹಾಗೂ ವಂದನಾರ್ಪಣೆ ನೆರವೇರಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ
    In ವಿಶೇಷ ಲೇಖನ
  • “ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ
    In ವಿಶೇಷ ಲೇಖನ
  • ‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 24, 2026
    In ದಿನಪತ್ರಿಕೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026
    In ದಿನಪತ್ರಿಕೆ
  • ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.