Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪಣ ತೊಡಿ :ಪ್ರಭುಕುಮಾರ ಶ್ರೀ
(ರಾಜ್ಯ ) ಜಿಲ್ಲೆ

ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪಣ ತೊಡಿ :ಪ್ರಭುಕುಮಾರ ಶ್ರೀ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರ: ಪ್ರತಿಯೊಬ್ಬ ಮಾನವನು ಸಮಾಜದಲ್ಲಿ ಬದುಕುವಾಗ ಸಂಸ್ಕಾರ, ಸಂಸ್ಕೃತಿ, ಧರ್ಮ ಆಚರಣೆ, ನಡೆ ನುಡಿಯಲ್ಲಿ ತತ್ವ ಸಿದ್ದಾಂತಗಳನ್ನು ಅಳವಡಿಸಿಕೊಂಡು ಕುಟುಂಬ ವ್ಯವಸ್ಥೆಯನ್ನು ಉತ್ತುಂಗ ಶಿಖರಕ್ಕೆ ಒಯ್ಯುವ ಉದಾತ್ತ ಚಿಂತನೆಯ ಮನೋಭಾವನೆಯಲ್ಲಿ ತೊಡಗಿಕೊಳ್ಳಬೇಕು ಎಂದು ಬೇಲೂರು & ಕೊಲ್ಹಾರ ಹಿರೇಮಠದ ಪೀಠಾಧೀಕಾರಿ ಪ್ರಭುಕುಮಾರ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು.
ಶುಕ್ರವಾರ ಹಿರೇಮಠದಲ್ಲಿ ಹಮ್ಮಿಕೊಂಡ ವಿಶ್ವ ಮಾನವ ದಿನಾಚರಣೆಯ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
ಇಂದಿನ ಸಮಾಜದಲ್ಲಿ ಅತ್ಯಂತ ಚಿಕ್ಕ ವಯಸ್ಸಿನಲ್ಲಿಯೇ ಯುವ ಸಮೂಹ ಮಧ್ಯ ಸೇವನೆ, ಮಾದಕ ದ್ರವ್ಯ, ಬೀಡಿ ಸಿಗರೇಟ ತಂಬಾಕು ಭಂಗಿ ಸೇವನೆ ಮಾಡುವದರ ಜೊತೆಗೆ ವಿವಿಧ ತರಹದ ಜೂಜಾಟಗಳಲ್ಲಿ ತೊಡಗಿಕೊಂಡು ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವವರಲ್ಲದೇ ಕುಟುಂಬದ ನೆಮ್ಮದಿಯನ್ನು ಕಳೆಯುತ್ತಿರುವದು ನಾಚಿಕೆಗೇಡಿತನದ ಸಂಗತಿಯಾಗಿದೆ ಎಂದರು.
ದುಶ್ಚಟಗಳಿಗೆ ಬಲಿಯಾಗಿ ತಾವು ಮಾಡಿದ ದುಡಿಮೆಯ ಹಣ ತಂದೆ ತಾಯಿಗಳ ಕೂಡಿಟ್ಟ ಹಣ ವ್ಯಯವಾಗುವದಲ್ಲದೇ ದೇಹಾರೊಗ್ಯ ಮಾನಸಿಕ ಖಿನ್ನತೆ ಬೌದ್ದಿಕ ಆರೋಗ್ಯವನ್ನು ಕೆಡಿಸಿಕೊಂಡು ಕ್ಷಣ ಕ್ಷಣಕ್ಕೂ ದುಖಃ ಸಂಕಟದ ಯಾತನೆ ಅನುಭವಿಸುವರು. ಅಷ್ಟೇ ಅಲ್ಲದೇ ಮನೆಗಳಿಗೆ ಮಹಾಮಾರಿಯಾಗಿ ಸಮಾಜಕ್ಕೆ ಕಂಟಕ ಪ್ರಾಯರಾಗಿ ಕೊನೆಗೊಮ್ಮೆ ತಮ್ಮ ತಲೆ ಮೇಲೆ ತಾವೇ ಚಪ್ಪಡಿ ಎಳೆದುಕೊಳ್ಳುವ ಹೀನಾಯ ಸ್ಥಿತಿಗೆ ತಲುಪಿಸುವಂತಹ ಕೆಟ್ಟ ಚಟಗಳಿಂದ ಪ್ರತಿಯೊಬ್ಬ ವ್ಯಕ್ತಿಗಳು ದೂರವಿದ್ದು ಸಮಾಜದಲ್ಲಿ ಸುಂದರ ಸ್ವಚ್ಚಂದ ಬದುಕನ್ನು ಸಾಗಿಸುವ ಮಾನವರಾಗಿ ಜೀವಿಸಲು ಕಲಿಯಬೇಕೆಂದು ಹೇಳಿದರು.
ನಮ್ಮ ನಾಡಿನ ಸಂತ ಶ್ರೇಷ್ಠರಾದ ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ ಲಿಂಗೈಕ್ಯದ ವರ್ಷಾಚರಣೆಯೂ ಕೂಡ ಹೊಸ ವರ್ಷದಲ್ಲಿಯೇ ಬರುವುದರಿಂದ ಅವರಿಗೆ ಗೌರವ ತರಲು ಸಮಾಜದ ಪ್ರತಿಯೊಬ್ಬರು ಶ್ರಮವಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡಲು ಸಿದ್ದರಾಗಬೇಕಾದ ಅನಿವಾರ್ಯ ಪರಿಸ್ಥಿತಿ ಬಂದೊದಗಿದೆ ಎಂದರು.
ಈ ವೇಳೆ ಶ್ರೀಗಳ ಪೂರ್ವಾಶ್ರಮದ ತಂದೆಯವರಾದ ಮುರುಘೇಂದ್ರ ಮಹಾಸ್ವಾಮಿಗಳು, ಕೊಲ್ಹಾರ ತಾಲೂಕು ಹೋರಾಟ ಸಮೀತಿ ಅಧ್ಯಕ್ಷ ಈರಣಗೌಡ ಕೋಮಾರ, ವ್ಯಸನಮುಕ್ತ ಸಮಾಜ ನಿರ್ಮಾಣ ಹೋರಾಟ ಸಮೀತಿಯ ಪರಶುರಾಮ ಗಣಿ, ಸಂಜೀವ ಬಿರಾದಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ
    In ವಿಶೇಷ ಲೇಖನ
  • “ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ
    In ವಿಶೇಷ ಲೇಖನ
  • ‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 24, 2026
    In ದಿನಪತ್ರಿಕೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026
    In ದಿನಪತ್ರಿಕೆ
  • ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.