ವಿಜಯಪುರ: ಇಸ್ರೋ ಮಾಜಿ ಅಧ್ಯಕ್ಷ ಪ್ರೊ. ಎ. ಎಸ್. ಕಿರಣಕುಮಾರ ಅವರು ಇಂದು ಶನಿವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದರು
ಈ ಸಂದರ್ಭದಲ್ಲಿ ಪ್ರೊ. ಎ.ಎಸ್. ಕಿರಣಕುಮಾರ ಅವರನ್ನು ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಸಮಕುಲಪತಿ ಡಾ. ಅರುಣ ಸಿ ಇನಾಮದಾರ, ಕುಲಸಚಿವ ಡಾ. ಆರ್. ವಿ. ಕುಲಕರ್ಣಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ವಿಶೇಷ ಉಪನ್ಯಾಸ ನೀಡಿದ ಪ್ರೊ. ಎ.ಎಸ್. ಕಿರಣಕುಮಾರ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಇತ್ತೀಚಿನ ಸಾಧನೆಗಳು, ಬಾಹ್ಯಾಕಾಶ ತಂತ್ರಜ್ಞಾನದಲ್ಲಿನ ನಡೆದಿರುವ ಪ್ರಗತಿ ಮತ್ತು ಭಾರತದ ಬಾಹ್ಯಾಕಾಶ ಪರಿಶೋಧನೆ ಪ್ರಯತ್ನಗಳ ಭವಿಷ್ಯ ಪಥದ ಒಳನೋಟಗಳನ್ನು ಹಂಚಿಕೊಂಡರು. ಅಲ್ಲದೇ, ಬಾಹ್ಯಾಕಾಶ ಸಂಶೋಧನೆಯಲ್ಲಿನ ಅನ್ವೇಷಣೆಯ ಸಂದರ್ಭದಲ್ಲಿ ಇಸ್ರೋ ಎದುರಿಸಿದ ಸವಾಲುಗಳು ಮತ್ತು ಯಶಸ್ಸಿನ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಉಪಪ್ರಾಚಾರ್ಯ ಡಾ. ಎಂ. ಬಿ. ಪಾಟೀಲ, ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ಆರ್. ಬಿ. ಕೊಟ್ನಾಳ, ಉಪಕುಲಸಚಿವ ಸತೀಶ ಪಾಟೀಲ, ಕಾಲೇಜಿನ ನಾನಾ ಪ್ರಾಧ್ಯಾಪಕರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

