Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ವ ರೀತಿಯಿಂದ ಸಿಂದಗಿ ಜಿಲ್ಲೆಯಾಗಲು ಮುಂದು :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ಸರ್ವ ರೀತಿಯಿಂದ ಸಿಂದಗಿ ಜಿಲ್ಲೆಯಾಗಲು ಮುಂದು :ಶಾಸಕ ಮನಗೂಳಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಕಂದಾಯ ಇಲಾಖೆಯ ಸೆಕ್ರೆಟೆಡ್ ಆಫೀಸಿನ ಉಲ್ಲೇಖದ ಮೇರೆಗೆ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಇಂಡಿ ತಾಲೂಕನ್ನು ಜಿಲ್ಲಾ ಕೇಂದ್ರವನ್ನಾಗಿಸಬೇಕೆನ್ನುವ ಜನಾಭಿಪ್ರಾಯ ಸಂಗ್ರಹ ಮಾಡಲು ಸಭೆ ಕರೆಯಲಾಗಿದೆ. ಅದಕ್ಕೆ ಸಾಧಕ ಬಾಧಕಗಳನ್ನು ಚರ್ಚಿಸಿ ಅಭಿಪ್ರಾಯ ಮಂಡಿಸಿ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು. ಕಾರಣ ಜ.೧೦ರ ಒಳಗಾಗಿ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಬೇಕು ಎಂದು ಇಂಡಿ ಉಪವಿಭಾಗಾಧಿಕಾರಿ ಚಂದ್ರಕಾಂತ ಗದ್ಯಾಳ ಹೇಳಿದರು.
ಪಟ್ಟಣದ ತಾಪಂ ಸಭಾ ಭವನದಲ್ಲಿ ನಡೆದ ಇಂಡಿ ತಾಲೂಕನ್ನು ಜಿಲ್ಲಾ ಕೇಂದ್ರವನ್ನಾಗಿಸಲು ಕರೆದ ಜನಾಭಿಪ್ರಾಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಾಸಕ ಅಶೋಕ ಮನಗೂಳಿ ಮಾತನಾಡಿ, ಸರಕಾರದಿಂದ ಬಂದ ವರದಿಯ ಬಗ್ಗೆ ಯಾರಿಗೂ ಸಂಪರ್ಕ ಮಾಡಿಲ್ಲ. ಹಿಂದೆ ಅಖಂಡ ಜಿಲ್ಲೆಯಲ್ಲಿ ೧೫ ತಾಲೂಕುಗಳಿದ್ದವು ಬಾಗಲಕೋಟ ಪ್ರತ್ಯೇಕ ಜಿಲ್ಲೆಯಾಗಿರುವುದರಿಂದ ಅಭಿವೃದ್ಧಿ ಕುಂಟಿತವಾಗಿತ್ತು ಜೆ.ಎಚ್.ಪಟೇಲ, ಎಚ್.ಡಿ.ಕುಮಾರಸ್ವಾಮಿಯವರು ಮತ್ತೆ ಹಲವು ತಾಲೂಕುಗಳನ್ನು ರಚನೆ ಮಾಡಿರುವುದರಿಂದ ಈ ಜಿಲ್ಲೆಗೆ ೧೩ ತಾಲೂಕುಗಳಾಗಿವೆ ಇವುಗಳಲ್ಲಿ ನೀರಾವರಿ, ರಾಷ್ಟ್ರೀಯ ಹೆದ್ದಾರಿಯಿಂದ ನಾಲ್ಕು ರಾಜ್ಯಗಳ ಸಂಪರ್ಕಕೊಂಡಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ತುಲನಾತ್ಮವಾಗಿ ನೋಡಿದಾಗ ಎಲ್ಲ ತಾಲೂಕುಗಳಿಗಿಂತ ಸಿಂದಗಿ ತಾಲೂಕು ಮುಂದಿದೆ. ಅದಕ್ಕೆ ಎಸ್ಪಿ, ಡಿವೈಎಸ್ಪಿ, ಆರ್‌ಟಿಓ ಆಫೀಸ್‌ಗಳನ್ನು ಮಂಜೂರು ಮಾಡಬೇಕು ಎಂದು ಸರಕಾರಕ್ಕೆ ಮನವಿ ಮಾಡಿಕೊಂಡಿದ್ದೇನೆ. ಆ ಕಾರಣಕ್ಕೆ ಸಿಂದಗಿ ಜಿಲ್ಲೆಯಾಗುವುದರಲ್ಲಿ ಸಂದೇಹವಿಲ್ಲ ಎಂದು ಅಭಿಮತ ವ್ಯಕ್ತಪಡಿಸಿದರು.
ಮಾಜಿ ಶಾಸಕ ರಮೇಶ ಭೂಸನೂರ ಮಾತನಾಡಿದರು.
ಮಾಜಿ ವಿಪ ಸದಸ್ಯ ಅರುಣ ಶಹಾಪುರ ಮಾತನಾಡಿದರು
ಮಾಜಿ ಶಾಸಕ ಶರಣಪ್ಪ ಸುಣಗಾರ ಮಾತನಾಡಿದರು.
ಈ ಸಂದರ್ಭದಲ್ಲಿ ಮಕ್ಕಳ ಸಾಹಿತಿ ಹ.ಮ.ಪೂಜಾರಿ, ಸಾಹಿತಿ ಡಾ.ಎಂ.ಎಂ.ಪಡಶೆಟ್ಟಿ, ವೈ.ಸಿ.ಮಯೂರ, ಡಾ.ದಸ್ತಗೀರ ಮುಲ್ಲಾ, ರಾಜಶೇಖರ ಕೂಚಬಾಳ, ಮಹಾಂತೇಶ ಪಟ್ಟಣಶೆಟ್ಟಿ, ಅಶೋಕ ಅಲ್ಲಾಪುರ, ಶಿಲ್ಪಾ ಕುದರಗೊಂಡ, ಸಂತೋಷ ಮಣಿಗೇರಿ, ಸಾಯಬಣ್ಣ ಪುರದಾಳ, ರಾಕೇಶ ಕಾಂಬಳೆ, ಅಶೋಕ ಸುಲ್ಪಿ ಸೇರಿದಂತೆ ಅನೇಕರು ಮಾತನಾಡಿ, ಸಿಂದಗಿ ತಾಲೂಕು ಜಿಲ್ಲೆಯಾಗುವ ಎಲ್ಲ ಲಕ್ಷಣಗಳಿವೆ. ಸಿಂದಗಿ ಜಿಲ್ಲೆಯನ್ನಾಗಿ ಮಾಡಲು ಬೆಂಗಳೂರು ಮಟ್ಟದವರೆಗೂ ಹೋರಾಟ ಮಾಡೋಣ. ಎಲ್ಲ ತಾಲೂಕುಗಳಿಗೂ ಹೋಗಿ ಅಭಿಪ್ರಾಯ ಸಂಗ್ರಹಣೆ ಮಾಡಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ, ತಾಪಂ ಇಓ ರಾಮು ಅಗ್ನಿ, ಕಸಾಪ ಅದ್ಯಕ್ಷ ಶಿವಾನಂದ ಬಡಾನೂರ, ಮಾಜಿ ಜಿಪಂ ಉಪಾದ್ಯಕ್ಷ ಸಿದ್ದರಾಮ ಪಾಟೀಲ ವೇದಿಕೆ ಮೇಲಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.