ಮುದ್ದೇಬಿಹಾಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಬ್ಬಿನ ಹೊಲಕ್ಕೆ ಬೆಂಕಿ ತಗುಲಿ ಸಂಪೂರ್ಣ ಬೆಳೆ ಹಾನಿಯಾದ ಘಟನೆ ತಾಲೂಕಿನ ಕವಡಿಮಟ್ಟಿ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.
ಸಿದ್ದಯ್ಯ ರುದ್ರಯ್ಯ ಗಣಾಚಾರಿ ಮತ್ತು ಮಹೇಶ ರುದ್ರಯ್ಯ ಗಣಾಚಾರಿ ಎಂಬುವವರಿಗೆ ಸೇರಿದ್ದ ೫ ಎಕರೆ ಜಮೀನಿನಲ್ಲಿ ಬೆಳೆದ ಕಬ್ಬಿನ ಬೆಳೆ ಕಟಾವು ಹಂತದಲ್ಲಿದ್ದಾಗ ಈ ಅವಘಡ ಸಂಭವಿಸಿದ್ದು ರೈತರಿಗೆ ವಿಧಿ ಬರೆ ಎಳೆದಂತಾಗಿದೆ.
ಈ ವೇಳೆ ಮಾಧ್ಯಮದವರೊಂದಿಗೆ ಸಿದ್ದಯ್ಯ ಮಾತನಾಡಿ ಮಳೆ ಇಲ್ಲದೇ ಈಗಾಗಲೇ ಸಾಕಷ್ಟು ತೊಂದರೆ ಅನುಭವಿಸುತ್ತಿರುವ ನಮಗೆ ಮತ್ತೊಂದು ದೊಡ್ಡ ಪೆಟ್ಟು ಬಿದ್ದಿದೆ. ಸರ್ಕಾರದ ಸೂಕ್ತ ಪರಿಹಾರಕ್ಕೆ ನಾವು ಎದುರು ನೋಡುತ್ತಿದ್ದೇವೆ. ಆದಷ್ಟು ಬೇಗ ಪರಿಹಾರ ನೀಡಿ ನಮ್ಮ ಕಣ್ಣೀರು ಒರೆಸಿ ಎಂದು ಅಧಿಕಾರಿಗಳಿಗೆ ಬೇಡಿಕೊಂಡರು.
ಘಟನಾ ಸ್ಥಳಕ್ಕೆ ಶುಕ್ರವಾರ ಕಂದಾಯ ಇಲಾಖೆಯ ಅಧಿಕಾರಿ ಮೌಲಾಲಿ ನದಾಫ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
