ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಠನೆ | ಬಿಎಸ್ವೈ ಮೇಲಿನ ಆರೋಪಕ್ಕೆ ದಾಖಲೆ ಕೊಡಲಿ | ರಾಜ್ಯಾಧ್ಯಕ್ಷ ಮಾಡಿದವರು ಬಿಎಸ್ವೈ ಅಲ್ಲ
ವಿಜಯಪುರ: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬಗ್ಗೆ ಯಾರೂ ಯಾವುದೇ ಅನುಕಂಪ ತೋರಿಸುವ ಅಗತ್ಯವಿಲ್ಲ, ಆರೋಪ ಮಾಡಿದವರು ದಾಖಲೆ ಇದ್ರೆ ಸರ್ಕಾರಕ್ಕೆ ಕೊಡಲಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಮಾಜಿ ಸಿಎಂ ಬಿ ಎಸ್ ವೈ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಮೌನ ವಹಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಶನಿವಾರ ನಗರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ ಅವರು, ಆರೋಪದಲ್ಲಿ ಸತ್ಯಾಂಶ ಇದ್ರೆ ಪ್ರತಿಕ್ರಿಯೆ ಬರ್ತದೆ. ಹುಡುಗಾಟಿಕೆಯ ಹೇಳಿಕೆ ಇದ್ರೆ ಬರೊಲ್ಲ ಎಂದು ಶಾಸಕ ಯತ್ನಾಳ ಆರೋಪಕ್ಕೆ ಟಾಂಗ್ ನೀಡಿದರು.
ನಾನು ರಾಜ್ಯಾಧ್ಯಕ್ಷನಾಗಿ ಮೊದಲ ಭಾರಿಗೆ ಇಲ್ಲಿಗೆ ಭೇಟಿ ಕೊಟ್ಟಿದ್ದೇನೆ, ನನ್ನನ್ನು ರಾಜ್ಯಾಧ್ಯಕ್ಷನನ್ನಾಗಿ
ಯಡಿಯೂರಪ್ಪನವರು ಮಾಡಿಲ್ಲ, ಪ್ರಧಾನಿ ಮೊದಿ, ಜೆ ಪಿ ನಡ್ಡಾ, ಸೇರಿದಂತೆ ರಾಷ್ಟ್ರೀಯ ನಾಯಕರು ಮಾಡಿದ್ದಾರೆ. ನನ್ನನ್ನು ಅಧ್ಯಕ್ಷನನ್ನಾಗಿ ಮಾಡಿದ ಮೇಲೆ ಎಲ್ಲರೂ ಸಹಕಾರ, ಆಶೀರ್ವಾದ ಮಾಡಿದ್ದಾರೆ ಎಂದರು.
ಹೊಸ ವರ್ಷದ ಹೊಸ್ತಿಲಲ್ಲಿ ನಾವು ಇದ್ದೇವೆ. ಎಲ್ಲ ಹಳೆಯ ವಿಚಾರಗಳನ್ನು ಬದಿಗಿಟ್ಟು ಎಲ್ಲರ ವಿಶ್ವಾಸ ತೆಗೆದುಕೊಂಡು ನಾನು ಮುನ್ನಡೆಯುತ್ತೇನೆ. ನಾನು ಇಟ್ಟ ಗುರಿಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ, ಲೋಕಸಭೆ ಗೆಲ್ಲಬೇಕು, ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡಬೇಕೆಂಬುದೇ ನಮ್ಮ ಪ್ರಮುಖ ದ್ಯೇಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಸಂಸದ ರಮೇಶ ಜಿಗಜಿಣಗಿ, ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ, ಮಾಜಿ ಸಚಿವರಾದ ಮುರುಗೇಶ ನಿರಾಣಿ, ಸಂಗಣ್ಣ ಕೆ. ಬೆಳ್ಳುಬ್ಬಿ, ಮಾಜಿ ಶಾಸಕರಾದ ರಮೇಶ ಭೂಸನೂರ, ಸೋಮನಗೌಡ ಪಾಟೀಲ, ಬಿಜೆಪಿ ಮುಖಂಡ ಸುರೇಶ ಬಿರಾದಾರ ಸೇರಿದಂತೆ ಅನೇಕ ಮುಖಂಡರಿದ್ದರು.

